ಅಂಫಾನ್ ಸೈಕ್ಲೋನ್ ಹೊಡೆತಕ್ಕೆ ಮುಳುಗಿದ ಕೋಲ್ಕತ್ತಾ ವಿಮಾನ ನಿಲ್ದಾಣ

ಕೋಲ್ಕತ್ತಾ: ಅಂಫಾನ್ ಸಕ್ಲೋನ್ ನಿಂದಾಗಿ ಕೋಲ್ಕತ್ತಾ ವಿಮಾನ ನಿಲ್ದಾಣ ಮುಳುಗಡೆಯಾಗಿದ್ದು, ಏರ್ ಪೋರ್ಟ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸುಮಾರು 40 ಟನ್ ನೀರು ನಿಂತಿದೆ. ವಿಮಾನಗಳು ಯಾವುದೇ ನದಿಯಲ್ಲಿ ಲ್ಯಾಂಡ್ ಆದಂತೆ ಕಾಣುತ್ತಿವೆ. ರನ್ ವೇ ಹೊರತುಪಡಿಸಿ ನಿಲ್ದಾಣದ ಬಹುತೇಕ ಪ್ರದೇಶಗಳಿಗೆ ನೀರು ನುಗ್ಗಿದೆ. ಚಂಡಮಾರುತದ ಆರ್ಭಟಕ್ಕೆ ಅಪಾರ ಪ್ರಮಾಣದ ಆಸ್ತಿಪಾಸ್ತಿಗಳು ನಾಶಗೊಂಡಿದ್ದು, ಹಲವೆಡೆ ಬೃಹತ್ ಮರಗಳು ಧರೆಗುರುಳಿವೆ. ಕೋಲ್ಕತಾದಲ್ಲಿ ಅನೇಕ ಕಟ್ಟಡಗಳು ನೆಲಕಚ್ಚಿವೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ 6.5 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಹಾಗೂ ಒಡಿಶಾದಲ್ಲಿ 1.58 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಬುಧವಾರ ಮಧ್ಯಾಹ್ನ 2.30ಕ್ಕೆ ಅಂಫಾನ್ ಚಂಡಮಾರುತವು ಪಶ್ಚಿಮ ಬಂಗಾಳದ ದಿಘಾ ಹಾಗೂ ಬಾಂಗ್ಲಾದೇಶದ ಹಟಿಯಾ ದ್ವೀಪದ ನಡುವೆ ಬಂದು ಅಪ್ಪಳಿಸಿತು. ಮೊದಲು 170 ಕಿಮೀ ವೇಗದಲ್ಲಿದ್ದ ಚಂಡಮಾರುತ ಬಳಿಕ 185 ಕಿಮೀ ವೇಗ ಪಡೆದುಕೊಂಡು ಮುನ್ನುಗ್ಗಿದೆ. ಈ ಹಿನ್ನೆಲೆ ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಹಲವೆಡೆ ಜನವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿ ಹೋಗಿವೆ. ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಹೌರಾ ಜಿಲ್ಲೆ ಹಾಗೂ ಉತ್ತರ 24 ಪರಗಣ ಜಿಲ್ಲೆಯಲ್ಲಿ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

ಪ್ರತಿ ಗಂಟೆಗೆ 165 ಕಿಲೋ ಮೀಟರ್ ವೇಗದಲ್ಲಿ ಅಂಫಾನ್ ಬೀಸುತ್ತಿದೆ. ಈ ರೀತಿಯ ಸೈಕ್ಲೋನ್ ಜೀವನದಲ್ಲಿತೇ ನೋಡಿರಲಿಲ್ಲ ಎಂದು ಪಶ್ಚಿಮ ಬಂಗಾಳದ ಜನರು ಹೇಳುತ್ತಾರೆ. ಕೆಲ ಹಿರಿಯರು 30 ವರ್ಷಗಳ ಹಿಂದೆ ಇದೇ ಚಂಡಮಾರುತ ಅಪ್ಪಳಿಸಿತ್ತು ಎಂದು ನೆನಪಿಸಿಕೊಳ್ಳುತ್ತಾರೆ.

ಅಂಫಾನ್ ಸೈಕ್ಲೋನ್‍ಗೆ ಸಿಲುಕಿರೋ ಪಶ್ಚಿಮ ಬಂಗಾಳದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಕೊರೊನಾ ಮಧ್ಯೆ ಅಂಫನಾ ಸೈಕ್ಲೋನ್ ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ. ಓಡಿಶಾ ಮತ್ತು ಪಶ್ವಿಮ ಬಂಗಾಳದಲ್ಲಿ ಅಂಫಾನ್ ರಣಚಂಡಿಗೆ ಸಿಲುಕಿ 12 ಮಂದಿ ಸಾವನ್ನಪ್ಪಿದ್ದಾರೆ.

Comments

Leave a Reply

Your email address will not be published. Required fields are marked *