ಅಕ್ರಮವಾಗಿ ಅಂಪೋಟೆರಿಸನ್ ಬಿ ಇಂಜೆಕ್ಷನ್ ಮಾರಾಟಕ್ಕೆ ಯತ್ನ- ಮೂವರ ಬಂಧನ

ಹುಬ್ಬಳ್ಳಿ: ಕೊರೊನಾದಿಂದ ನಿತ್ಯ ನೂರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಜೀವ ರಕ್ಷಕ ಔಷಧಿಯನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿರುವ ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ನಾಸೀರ್ ಹುಸೇನ್ ಅಕ್ತಾರ, ರಾಘವೇಂದ್ರ ಉಣಕಲ್, ನಾಗರಾಜ ನಡವಲಕೇರಿ ಬಂಧಿತ ಆರೋಪಿಗಳಾಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸೇರಿದಂತೆ ಮೂವರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶ್ವಸಿಯಾಗಿದ್ದಾರೆ. ಇದನ್ನೂ ಓದಿ: ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಐಪಿಎಸ್ ಅಧಿಕಾರಿ

 

ಬ್ಲ್ಯಾಕ್ ಫಂಗಸ್‍ಗೆ ಚಿಕಿತ್ಸೆ ನೀಡುವ ಅಂಪೋಟೆರಿಸನ್ ಬಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಮೂವರನ್ನ ಸಿಸಿಬಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಿಮ್ಸ್ ಆಸ್ಪತ್ರೆಯ ವ್ಯಾಪ್ತಿಯ ಔಷಧಿ ಅಂಗಡಿಯಲ್ಲಿ ಅಕ್ರಮವಾಗಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 4 ವಯಲ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ:  ಇಂದು, ನಾಳೆ ರಾಜ್ಯಕ್ಕೆ ಭಾರೀ ಮಳೆ- ಹಲವೆಡೆ ಆರೆಂಜ್ ಅಲರ್ಟ್

ನಾಸೀರ್ ಹುಸೇನ್ 7 ಸಾವಿರಕ್ಕೆ ಇಂಜೆಕ್ಷನ್ ತಂದು ಹೆಚ್ಚಿಗೆ ಹಣಕ್ಕೆ ಮಾರಾಟ ಮಾಡುತ್ತಿದ್ದನು. ಖಚಿತ ಮಾಹಿತಿ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *