ಅಕ್ರಮ ಗಣಿಗಾರಿಕೆಗಳನ್ನ ಸಕ್ರಮ ಮಾಡಲು ಹೊರಟ ದುರಾಡಳಿತಕ್ಕೆ ಕಾರ್ಮಿಕರು ಬಲಿ: ಸಿದ್ದರಾಮಯ್ಯ

– ಸರ್ಕಾರ ಯಾರನ್ನ ರಕ್ಷಿಸುತ್ತಿದೆ?

ಬೆಂಗಳೂರು: ಅಕ್ರಮ ಗಣಿಗಾರಿಕೆಗಳನ್ನ ಸಕ್ರಮ ಮಾಡಲು ಹೊರಟ ಸಿಎಂ ಅವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿಗಳನ್ನ ಒತ್ತಾಯಿಸುವೆ.

ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಸಿಎಂ ಅವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಇದ್ದರೆ ಸಕ್ರಮ ಮಾಡಿಕೊಳ್ಳಿ – ಉಲ್ಟಾ ಹೊಡೆದ ಬಿಎಸ್‍ವೈ

ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರುಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಸಿಎಂ ಅವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸೇಫರ್ ಝೋನ್‍ಗಳಲ್ಲಿ ಅನುಮತಿ ಪಡೆದು ಗಣಿಗಾರಿಕೆ ಮಾಡೋದು ತಪ್ಪಲ್ಲ: ವಿಶ್ವನಾಥ್

Comments

Leave a Reply

Your email address will not be published. Required fields are marked *