ಅನಾಥ ವೃದ್ಧೆಗೆ ತುತ್ತು ತಿನ್ನಿಸಿದ ಪೊಲೀಸ್ ಕಾರ್ಯಕ್ಕೆ ಭಾರೀ ಮೆಚ್ಚುಗೆ

ಲಕ್ನೋ: ರಸ್ತೆ ಬದಿಯಲ್ಲಿ ಕುಳಿತಿದ್ದ ಅನಾಥ ವೃದ್ಧೆಗೆ ತುತ್ತು ಅನ್ನ ತಿನ್ನಿಸಿದ ಪೊಲೀಸ್ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಫೋಟೋ ನೋಡಿದ ನೆಟ್ಟಿಗರು ಪೊಲೀಸ್ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

https://twitter.com/RinkuHooda001/status/1399249997544116228

ಈ ಫೋಟೋವನ್ನು ಪ್ಯಾರಾಲಿಂಪಿಯನ್ ರಿಂಕು ಹುಡಾ ಎಂಬವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಆ ಬಳಿಕದಿಂದ ಫೋಟೋ ಭಾರೀ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಅಲ್ಲದೆ ಅಪ್ಲೋಡ್ ಮಾಡಿದ ತಕ್ಷಣವೇ ಸುಮಾರು 500ಕ್ಕೂ ಎಹಚ್ಚು ಮಂದಿ ರಿಟ್ವೀಟ್ ಮಾಡಿದ್ದು, 76 ಸಾವಿರಕ್ಕೂ ಅಧಿಕ ಮಂದಿ ಲೈಕ್ ಕೊಟ್ಟಿದ್ದಾರೆ.

ಹಲವರು ಪೊಲೀಸ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಗೆ ಹ್ಯಾಟ್ಸ್ ಆಫ್, ಒಳ್ಳೆಯ ಕೆಲಸ ಮಾಡಿದ್ದೀರಿ ಸರ್, ನಿಮ್ಮ ಮೇಲೆ ಗೌರವ ಇದೆ ಅಣ್ಣ.. ಹೀಗೆ ಹಲವು ಮಂದಿ ಹೊಗಳಿದ್ದಾರೆ. ಇದನ್ನೂ ಓದಿ: ನಿರ್ಗತಿಕ ಮಕ್ಕಳ ಹಸಿವು ನೀಗಿಸಿದ ಪೊಲೀಸ್- ನೆಟ್ಟಿಗರಿಂದ ಮೆಚ್ಚುಗೆ

ಒಟ್ಟಿನಲ್ಲಿ ಮಹಾಮಾರಿ ಕೊರೊನಾ ವೈರಸ್ ಭಾರತಕ್ಕೆ ವಕ್ಕರಿಸಿದ ಬಳಿಕ ಅನೇಕ ಮಾನವೀಯ ಕಾರ್ಯಗಳು ನಡೆಯುತ್ತಲೇ ಇವೆ. ಹಲವಾರು ಮಂದಿ ಬಡವರಿಗೆ ಫುಡ್ ಕಿಟ್ ಕೊಡುವ ಮೂಲಕ ಹಸಿವು ನೀಗಿಸುತ್ತಿದ್ದರೆ, ಇನ್ನೂ ಕೆಲವರು ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಸೇರಿಸುವುದು, ಆಕ್ಸಿಜನ್, ಬೆಡ್ ವ್ಯವಸ್ಥೆ ಒದಗಿಸುವುದು ಹೀಗೆ ಹತ್ತು ಹಲವು ರೂಪಗಳಲ್ಲಿ ಬೆವರ ಬೆನ್ನಿಗೆ ನಿಲ್ಲುತ್ತಿದ್ದಾರೆ.

https://twitter.com/V_Abhyudaya/status/1399428144247967747

Comments

Leave a Reply

Your email address will not be published. Required fields are marked *