ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ 2 ಲಕ್ಷ ಪರಿಹಾರ- ಯುಪಿ ಸಿಎಂ

– ಟ್ರಕ್, ಬೊಲೆರೋ ಅಪಘಾತಕ್ಕೆ 14 ಮಂದಿ ಬಲಿ

ಲಕ್ನೋ: ಭೀಕರ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಉತ್ತರ ಪ್ರದೇಶದ ಪ್ರತಾಪ್‍ಗರ್ ನಲ್ಲಿ ಗುರುವಾರ ತಡರಾತ್ರಿ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‍ಗೆ ಬೊಲೆರೋ ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಮಕ್ಕಳು ಸೇರಿದಂತೆ 14 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಬೆಳಗ್ಗೆ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದರು. ಅಲ್ಲದೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದರು. ಇದೀಗ ದುರಂತದಲ್ಲಿ ಸಾವನ್ನಪಿದ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

ಬೊಲೆರೋದಲ್ಲಿದ್ದವರು ನಬಬ್ ಗಂಜ್ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದರು. ಆಗ ಈ ದಾರುಣ ಘಟನೆ ನಡೆದಿದೆ. ಸಂತ್ರಸ್ತರ ಕುಟುಂಬಗಳಿಗೆ ಎಲ್ಲಾ ಸಹಾಯವನ್ನು ನೀಡಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅಪಘಾತದ ನಂತರ ಐವರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಟ್ರಕ್ ಅಡಿಯಲ್ಲಿ ಸಿಕ್ಕಿಕೊಂಡಿರುವ ಬೊಲೆರೋ ಹೊರೆತೆಗೆದ ನಂತರ ಉಳಿದ ಶವಗಳನ್ನು ಹೊರತೆಗೆಯಲಾಗಿದೆ. ಅಪಘಾತದಲ್ಲಿ ಮೃತಪಟ್ಟ ಮಕ್ಕಳು ಎಲ್ಲರೂ 7 ರಿಂದ 15 ವರ್ಷದೊಳಗಿನವರಾಗಿದ್ದಾರೆ. ಉಳಿದ ಎಂಟು ಮಂದಿ ಬಲಿಪಶುಗಳು 20 ರಿಂದ 60 ವರ್ಷದೊಳಗಿನ ಪುರುಷರು ಎಂದು ಗುರುತಿಸಲಾಗಿದೆ.

Comments

Leave a Reply

Your email address will not be published. Required fields are marked *