ಅಪ್ಪು ಅಭಿನಯದ ಜೇಮ್ಸ್‌ ಶೂಟಿಂಗ್‌ ಕಮಲಾಪುರದಲ್ಲಿ ಆರಂಭ

ಬಳ್ಳಾರಿ: ಹೊಸಪೇಟೆ ತಾಲೂಕಿನ‌ ಕಮಲಾಪುರದ ಆರೆಂಜ್ ಕೌಂಟಿಯಲ್ಲಿ ಪವರ್ ಸ್ಟಾರ್ ಪುನೀತ್‌ ರಾಜಕುಮಾರ್‌ ಅವರು ನಟಿಸುತ್ತಿರುವ ಬಹು ನಿರೀಕ್ಷಿತ ಚಿತ್ರ ‘ಜೇಮ್ಸ್’ ಚಿತ್ರೀಕರಣ ಆರಂಭವಾಗಿದೆ.

ಚೇತನ್ ಕುಮಾರ್‌ ನಿರ್ದೇಶನದ ಚಿತ್ರದ ಶೂಟಿಂಗ್‌ ಇನ್ನೂ 4 ದಿನಗಳ ಕಾಲ ರೆಸಾರ್ಟ್‌ನಲ್ಲಿ ನಡೆಯಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಚಿತ್ರೀಕರಣ ತಡವಾಗಿ ಆರಂಭವಾಗಿದೆ. ಅಕ್ಟೋಬರ್ 12 ರಂದು ಸಂತೋಷ್ ಆನಂದ್ ರಾಮ್ ಅವರ ‘ಯುವರತ್ನ’ ಚಿತ್ರದ ಚಿತ್ರೀಕರಣ ಮುಗಿಸಿದ ಬಳಿಕ ಪುನೀತ್ ರಾಜ್‌ಕುಮಾರ್ ಜೇಮ್ಸ್‌ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ: ಜೇಮ್ಸ್ ಚಿತ್ರಕ್ಕೆ ಸ್ಟಾರ್ ನಟ ಎಂಟ್ರಿ

ಸ್ಯಾಂಡಲ್‌ವುಡ್ ಹಾಗೂ ನೆರೆಯ ರಾಜ್ಯಗಳ ಪ್ರಸಿದ್ಧ ಕಲಾವಿದರು ಚಿತ್ರದಲ್ಲಿ ಅಭಿನಯಿಸುತ್ತಿರುವುದರ ಬಗ್ಗೆ ಚಿತ್ರ ತಯಾರಕರು ಸುಳಿವು ನೀಡಿದ್ದಾರೆ.

ತೆಲುಗಿನ ಖ್ಯಾತ ನಟ ಶ್ರೀಕಾಂತ್ ಪ್ರಮುಖ ಪಾತ್ರದಲ್ಲಿ ಈ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಸಿನಿ ವಲಯದಲ್ಲಿ ಹರಿದಾಡುತ್ತಿದೆ. ನಾಯಕ ನಟನಾಗಿ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಶ್ರೀಕಾಂತ್, ಮೊದಲ ಬಾರಿಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆಗೆ ತೆರೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಜೇಮ್ಸ್ ಗಾಗಿ ನಟಿ ಅನು ಪ್ರಭಾಕರ್ ಸಹ ಬಣ್ಣ ಹಚ್ಚುತ್ತಿದ್ದಾರೆ. 55 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಅನು ಪ್ರಭಾಕರ್ ಪುನೀತ್ ಅವರೊಂದಿಗೆ ಇದೇ ಮೊದಲ ಬಾರಿ ಕಾಣಿಸಿಕೊಳ್ಳುತ್ತಿದ್ದಾರೆ.

ಹೊಸಪೇಟೆಯ ಕಿಶೋರ್ ಪತ್ತಿಕೊಂಡ ಅವರು ಚಿತ್ರವನ್ನು ನಿರ್ಮಿಸುತ್ತಿದ್ದು, ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.

Comments

Leave a Reply

Your email address will not be published. Required fields are marked *