ಅಮೆರಿಕದ ರಾಯಭಾರ ಕಚೇರಿಯಿಂದ ವಿಜಯ್ ನಿಧನಕ್ಕೆ ಕನ್ನಡದಲ್ಲೇ ಸಂತಾಪ

ಬೆಂಗಳೂರು: ಸ್ಯಾಂಡಲ್‍ವುಡ್ ಉದಯೋನ್ಮುಖ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರ ಅಕಾಲಿಕ ನಿಧನಕ್ಕೆ ರಾಜಕೀಯ ನಾಯಕರು ಸೇರಿದಂತೆ ಇಡೀ ಚಿತ್ರರಂಗವೇ ಕಂಬನಿ ಮಿಡಿದಿದೆ. ಜೊತೆಗೆ ಅಮೆರಿಕದ ರಾಯಭಾರ ಕಚೇರಿಂದಲೂ ಸಂತಾಪ ಸೂಚಿಸಲಾಗಿದೆ.

ಹೌದು. ಕನ್ನಡಲ್ಲಿಯೇ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿರುವುದು ವಿಶೇಷವಾಗಿದೆ. ಯೂಸ್ ಆ್ಯಂಡ್ ಚೆನ್ನೈ ಟ್ವಿಟ್ಟರ್ ಖಾತೆಯಿಂದ ಈ ರೀತಿ ಟ್ವೀಟ್ ಮಾಡುತ್ತಿದ್ದಂತೆಯೇ ಅನೇಕ ಮಂದಿ ರಿಟ್ವೀಟ್ ಮಾಡಿದ್ದಾರೆ. ಕೆಲವರು ನಮ್ಮ ದೇಶದವರೇ ಹೀಗೆ ಸಾಮಾನ್ಯ ಜನರಿಗೆ ಅರ್ಥ ಆಗುವ ರೀತಿಯಲ್ಲಿ ಹಾಕಲ್ಲ. ಆದರೆ ನೀವು ಕನ್ನಡದ ನಟನಿಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿರುವುದಕ್ಕೆ ಧನ್ಯವಾದಗಳು ಎಂದು ನೆಟ್ಟಿಗರು ತಿಳಿಸಿದ್ದಾರೆ.

ಟ್ವೀಟ್ ನಲ್ಲೇನಿದೆ..?
ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ ‘ಪ್ರೈಡ್’ ತಿಂಗಳ ಆಚರಣೆಯ ಅಂಗವಾಗಿ ಐಉಃಖಿಕಿi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ”ನಾನು ಅವನಲ್ಲ.. ಅವಳು” ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದ ಸಂಚಾರಿ ವಿಜಯ್. ಆರ್‍ಐಪಿ ವಿಜಯ್ ಎಂದು ಬರೆದುಕೊಳ್ಳಲಾಗಿದೆ.  ಇದನ್ನೂ ಓದಿ: ’10 ಸಾವಿರಕ್ಕೆ ನಾನ್ಯಾಕ್ ಬರ್ಲಿ ಹೋಗ್ರಿರಿ’ – ಆಯೋಜಕರ ಹೃದಯ ಕದ್ದ ಸಂಚಾರಿ ವಿಜಯ್

ನಡೆದಿದ್ದೇನು..?
ಶನಿವಾರ ರಾತ್ರಿ ಸ್ನೇಹಿತನ ಜೊತೆ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ವಿಜಯ್ ಮನೆ ಸಮೀಪವೇ ಅಪಘಾತ ಸಂಭವಿಸಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿಜಯ್ ಅವರು ಬೈಕಿನಿಂದ ಬಿದ್ದು ತಲೆ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಅವರನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿತ್ತು. ಆದರೆ ಗಂಭೀರ ಗಾಯಗೊಂಡಿದ್ದರಿಂದ ನಟ ಕೋಮಾಕ್ಕೆ ಜಾರಿದ್ದರು. ಇದನ್ನೂ ಓದಿ: ವಿಜಯ ಕುಮಾರ್ ಮುಂದೆ ‘ಸಂಚಾರಿ’ ಬಂದಿದ್ದು ಹೇಗೆ?

ಇತ್ತ ನಿನ್ನೆ ಬೆಳಗ್ಗೆ ವೈದ್ಯರು ನಟನ ಆರೋಗ್ಯದ ಬಗ್ಗೆ ಮಾತನಾಡಿ, ಬ್ರೈನ್ ನಿಷ್ಕ್ರಿಯಗೊಂಡಿದ್ದು, ಉಸಿರಾಡುತ್ತಿದ್ದಾರೆ ಎಂದು ತಿಳಿಸಿದ್ದರು. ಈ ನಡುವೆ ವಿಜಯ್ ಕುಟುಂಬಸ್ಥರು ಅಂಗಾಂಗಗಳನ್ನು ದಾನ ಮಾಡುವುದಾಗಿ ಘೋಷಿಸಿದ್ದರು. ಕುಟುಂಬದ ಇಚ್ಛೆಯಂತೆ 2 ಕಿಡ್ನಿ, 2 ಕಣ್ಣು, ಯಕೃತ್ತು, ಶ್ವಾಸಕೋಶ, 21 ಹೃದಯದ ಕವಾಟಗಳನ್ನು ದಾನ ಮಾಡಿ ಅಂಗಾಂಗ ಕಸಿಗಾಗಿ ಕಾಯುತ್ತಿದ್ದವರಿಗೆ ಜೋಡಿಸಲಾಯಿತು. ಇಂದು ಬೆಳಗ್ಗಿನ ಜಾವ 3:34ಕ್ಕೆ ಸಂಚಾರಿ ವಿಜಯ್ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.

ಬೆಳಗ್ಗೆ 6:50ಕ್ಕೆ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹವನ್ನು ವಿಜಯ್ ಕುಟುಂಬಕ್ಕೆ ನೀಡಲಾಗಿದೆ. ಬೆಳಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಮೃತದೇಹವನ್ನು ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಂಚನಹಳ್ಳಿಗೆ ತೆಗೆದುಕೊಂಡು ಹೋಗಲಾಗಿದ್ದು, ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.

Comments

Leave a Reply

Your email address will not be published. Required fields are marked *