ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಹರಿಪ್ರಿಯಾ ಅಭಿನಯದ ‘ಅಮೃತಮತಿ’ ಸಿನಿಮಾ ಆಸ್ಟ್ರಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.
ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮೊದಲಿಗೆ ಆನ್‍ಲೈನ್ ಸ್ಕ್ರೀನಿಂಗ್ ಮೂಲಕ ಚಿತ್ರೋತ್ಸವ ಆಯೋಜಿಸಲಾಗಿದೆ. ಜುಲೈ 22 ರಿಂದ ಆಗಸ್ಟ್ 5ರವರೆಗೆ ಚಿತ್ರೋತ್ಸವ ನಡೆಯಲಿದೆ. ಆನ್‍ಲೈನ್ ಸ್ಕ್ರೀನಿಂಗ್ ಮಾಡಲ್ಪಟ್ಟ ಸಿನಿಮಾಗಳು ಸ್ಪರ್ಧಾಕಣದಲ್ಲಿಯೂ ಇರಲಿದೆ. ನಂತರ ಸಮಾರಂಭ ಆಯೋಜಿಸಿ ಅಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಈ ಆನ್‍ಲೈನ್ ಸ್ಕ್ರೀನಿಂಗ್ ಆಗುವ ಸಿನಿಮಾಗಳ ಪಟ್ಟಿಯಲ್ಲಿ ‘ಅಮೃತಮತಿ’ ಚಿತ್ರ ಆಯ್ಕೆಯಾಗಿದೆ.

‘ಅಮೃತಮತಿ’ ಸಿನಿಮಾ 13ನೇ ಶತಮಾನದಲ್ಲಿ ಕನ್ನಡದ ಖ್ಯಾತ ಕವಿ ಜನ್ನ ರಚಿಸಿದ ‘ಯಶೋಧರ ಚರಿತೆ’ ಕಾವ್ಯವನ್ನು ಆಧರಿಸಿದೆ. ಈ ಸಿನಿಮಾ ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಪುಟ್ಟಣ್ಣ ನಿರ್ಮಾಣ ಹಾಗೂ ಬರಗೂರು ರಾಮಚಂದ್ರಪ್ಪ ನಿರ್ದೇಶನದಲ್ಲಿ ಮೂಡಿ ಬಂದಿದೆ. ಚಿತ್ರಕ್ಕೆ ಸುರೇಶ್ ಅರಸು ಸಂಕಲನ ಇದ್ದು, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನವಿದೆ.

ಈ ಸಿನಿಮಾದಲ್ಲಿ ನಟಿ ಹರಿಪ್ರಿಯಾ ಅಮೃತಮತಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಯಶೋಧರ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಸುಂದರರಾಜ್, ಪ್ರಮೀಳಾ ಜೋಷಾಯ್, ಅಂಬರೀಶ್ ಸಾರಂಗಿ, ಭೂಮಿಕಾ ಲಕ್ಷ್ಮೀ ನಾರಾಯಣ್ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ.


Leave a Reply