ಇಂದಿನಿಂದ ಬೆಂಗಳೂರಿನಲ್ಲಿ ಬಿಗಿ ನೈಟ್ ಕರ್ಫ್ಯೂ – ರಸ್ತೆಗೆ ಇಳಿದ್ರೆ ಕೇಸ್

ಬೆಂಗಳೂರು: ಕೊರೊನಾ ನಿಧಾನವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾತ್ರಿ ಕರ್ಫ್ಯೂವನ್ನು ಬಿಗಿಗೊಳಿಸಲು ಬಿಬಿಎಂಪಿ ಮುಂದಾಗಿದೆ.

ನೈಟ್ ಕರ್ಫ್ಯೂ ಈಗ ಜಾರಿಯಲ್ಲಿದ್ದರೂ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಬೆಂಗಳೂರಿಗರು ನೈಟ್ ಕರ್ಫ್ಯೂಗೆ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಹೀಗಾಗಿ ಜನರಲ್ಲಿ ಕೊರೋನಾ ಜಾಗೃತಿಗಾಗಿ ಬಿಗಿ ನೈಟ್ ಕರ್ಫ್ಯೂ ಜಾರಿಗೆ ಈಗ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಸಜ್ಜಾಗಿದೆ.

ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಕಟ್ಟುನಿಟ್ಟಿನ ನೈಟ್ ಕಫ್ರ್ಯೂ ಜಾರಿಯಾಗಲಿದೆ.

ಅನಗತ್ಯವಾಗಿ ಓಡಾಡಿದರೆ, ದಂಡ ಪ್ರಯೋಗದ ಎಚ್ಚರಿಕೆ ನೀಡಲಾಗಿದೆ. ಪೊಲೀಸ್ ಮಾರ್ಷಲ್ಸ್ ಹೆಚ್ಚುವರಿ ನಿಯೋಜನೆ ಮಾಡುವುದರ ಜೊತೆಗೆ ಸುಖಾಸುಮ್ಮನೆ ರಸ್ತೆಗೆ ಇಳಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್ ದಾಖಲಿಸುವ ಎಚ್ಚರಿಕೆ ನೀಡಿದೆ. ಇದನ್ನೂ ಓದಿ : ಟಿಬೇಟಿಯನ್ ಕಾಲೋನಿಯಲ್ಲಿ ಕೊರೊನಾ ಸ್ಪೋಟ- ಒಂದು ವಾರದಲ್ಲಿ 39 ಮಂದಿಗೆ ಸೋಂಕು 

ಯಾವುದಕ್ಕೆ ವಿನಾಯಿತಿ?
– ರೋಗಿಗಳನ್ನ ಕರೆದೊಯ್ಯುವಾಗ ಸಂಬಂಧಪಟ್ಟವರಿಗೆ ಮಾತ್ರ ಅವಕಾಶ
– ಯಾವುದೇ ಕಂಪನಿ ಹಾಗೂ ಕೈಗಾರಿಕಾ ಉದ್ಯೋಗಿಗಳು ಪಾಸ್ ಹೊಂದಿರಬೇಕು
– ಟೆಲಿಕಾಂ ಹಾಗೂ ಇಂಟರ್ನೆಟ್ ಸರ್ವೀಸಸ್ ವರ್ಕರ್ಸ್ ಐಡಿ ಕಾರ್ಡ್ ಹೊಂದಿರಬೇಕು
– ಮೆಡಿಕಲ್ ಎಮರ್ಜೆನ್ಸಿ ಹಾಗೂ ಅಗತ್ಯ ಸರಬರಾಜುವಾಹನಗಳಿಗೆ ಅವಕಾಶ
– ಅಗತ್ಯ ಸರಕು ಸಾಗಾಟ ವಾಹನಗಳಿಗೆ ಅವಕಾಶ
– ವಿಮಾನ ನಿಲ್ದಾಣ, ರೈಲ್ವೇ ಸೇರಿದಂತೆ ಓಡಾಟಕ್ಕೆ ಸೂಕ್ತ ಮಾಹಿತಿ ಒದಗಿಸಬೇಕು

Comments

Leave a Reply

Your email address will not be published. Required fields are marked *