ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಗೋಚರಿಸುತ್ತಿದ್ದು, ಇಂದು ಇಡೀ ರಾಜ್ಯದಲ್ಲಿ ಒಬ್ಬರು ಮಾತ್ರ ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಒಬ್ಬರು ಬಲಿಯಾಗಿರುವುದು ಹೊರತುಪಡಿಸಿ ಉಳಿದಂತೆ ಯಾವುದೇ ಜಿಲ್ಲೆಯಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ. ಇಂದು ಕರ್ನಾಟಕದಲ್ಲಿ 1,143 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 1,268 ಜನ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,13,483ಕ್ಕೆ ಏರಿಕೆ ಆಗಿದೆ. ಈ ಪೈಕಿ 8,87,815 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 13,610 ಸಕ್ರಿಯ ಪ್ರಕರಣಗಳಿವೆ.
ವಿಮಾನ ನಿಲ್ದಾಣದಲ್ಲಿ ಒಟ್ಟು 25 ಮಂದಿ ತಪಾಸಣೆಗೆ ಒಳಗಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 12,039 ಮಂದಿ ಕೊರೊನಾಗೆ ಬಲಿಯಾಗಿದ್ದು, ಸದ್ಯ 208 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು 10,658 ಆಂಟಿಜನ್ ಟೆಸ್ಟ್, 88,066 ಆರ್‍ಟಿ ಪಿಸಿಆರ್ ಸೇರಿದಂತೆ 98,724 ಪರೀಕ್ಷೆ ಮಾಡಲಾಗಿದೆ. ಒಟ್ಟು ರಾಜ್ಯದಲ್ಲಿ ಇಲ್ಲಿಯವರೆಗೆ 1,34,15,794 ಕೊರೊನಾ ಪರೀಕ್ಷೆ ಮಾಡಲಾಗಿದೆ.
ಎಂದಿನಂತೆ ಬೆಂಗಳೂರು ನಗರದಲ್ಲಿ 642 ಮಂದಿಗೆ ಸೋಂಕು ಬಂದಿದ್ದು 1 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಮೈಸೂರು 88, ತುಮಕೂರು 40, ಬಳ್ಳಾರಿ 28 ಮಂದಿಗೆ ಸೋಂಕು ಬಂದಿದೆ.

ಐಸಿಯುನಲ್ಲಿ ಒಟ್ಟು 208 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರದಲ್ಲಿ 99, ಕಲಬುರಗಿ 14, ತುಮಕೂರಲ್ಲಿ 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply