ಇದು ಬಿಎಸ್‍ವೈ ಸರ್ಕಾರದ ಜನಪರ ಕಾರ್ಯಗಳಿಗೆ ಜನ ನೀಡಿದ ಬೆಂಬಲ – ಸುಧಾಕರ್ ಬಣ್ಣನೆ

ಬೆಂಗಳೂರು: ಜನರ ನಾಡಿಮಿಡಿತ ಅರಿತು ಅಭ್ಯರ್ಥಿ ಹಾಕಿದ್ದರೆ ಬಹುಶಃ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲು ಆಗುತ್ತಿರಲಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಬಿಜೆಪಿಯ ಮುನಿರತ್ನ ಮತ್ತು ರಾಜೇಶ್ ಗೌಡ ಅವರು ಜಯಗಳಿಸಿದ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಜ್ಯೋತಿಷಿಗಳ ಮಾತು ಕೇಳಿ ಅಭ್ಯರ್ಥಿ ಹಾಕದೆ ಜನರ ನಾಡಿಮಿಡಿತ ಅರಿತು ಅಭ್ಯರ್ಥಿ ಹಾಕಿದ್ದರೆ ಬಹುಶಃ ಕಾಂಗ್ರೆಸ್ ಪಕ್ಷಕ್ಕೆ ಇಷ್ಟು ಹೀನಾಯ ಸೋಲು ಅನುಭವಿಸುವ ಪರಿಸ್ಥಿತಿ ಬರುತ್ತಿರಲಿಲ್ಲವೇನೋ. ಮುನಿರತ್ನ ಅವರ ಜನಪರ ಕಾರ್ಯಗಳು ಆರ್ ಆರ್ ನಗರದ ಜನತೆಯ ಮನ ಗೆದ್ದಿದ್ದು ಹ್ಯಾಟ್ರಿಕ್ ಗೆಲುವು ನೀಡುವ ಮೂಲಕ ಮತ್ತೊಮ್ಮೆ ಆಶೀರ್ವಾದ ಮಾಡಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಪಕ್ಷದ ಅಭ್ಯರ್ಥಿ ಶ್ರೀ ಮುನಿರತ್ನ ಅವರಿಗೆ ಅಭಿನಂದನೆಗಳು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದ ಜನಪರ ಕಾರ್ಯಗಳಿಗೆ ಬೆಂಬಲ ನೀಡಿದ ಜನತೆಗೆ ಮತ್ತು ಗೆಲುವಿಗೆ ಕಾರಣರಾದ ಪಕ್ಷದ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳು.

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರಿಗೆ ಅಭಿನಂದನೆಗಳು. ಈ ಅಭೂತಪೂರ್ವ ವಿಜಯ ಸಾಧಿಸಲು ಶ್ರಮಿಸಿದ ಪಕ್ಷದ ಎಲ್ಲಾ ನಾಯಕರಿಗೂ ಮತ್ತು ಕಾರ್ಯಕರ್ತರಿಗೂ ಅಭಿನಂದನೆಗಳು.

Comments

Leave a Reply

Your email address will not be published. Required fields are marked *