ಇನ್ನೂ ಎಚ್ಚೆತ್ತುಕೊಳ್ಳದ ದಕ್ಷಿಣ ಕನ್ನಡದ ಜನ- ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಬೇಕಾಬಿಟ್ಟಿ ಓಡಾಟ

ಮಂಗಳೂರು: ಕೊರೊನಾ ಮಹಾಮಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಟ್ಟಹಾಸ ಮುಂದುವರೆಸಿದ್ದು, ದಿನೇ ದಿನೇ ಪಾಸಿಟಿವಿಟಿ ರೇಟ್ ಹೆಚ್ಚಾಗುತ್ತಿದೆ. ಹೀಗಾಗಿ ಜೂನ್ 20ರವರೆಗೂ ಲಾಕ್‍ಡೌನ್ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಆದರೆ ಜನ ಮಾತ್ರ ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಬೇಕಾಬಿಟ್ಟಿ ಓಡಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ ಎನ್ನುವುದು ತಿಳಿದಿದ್ದರೂ ಜನ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಅಗತ್ಯ ವಸ್ತುಗಳ ಖರೀದಿಗೆ ಕಾಲಾವಕಾಶ ಕೊಟ್ಟಿರುವುದನ್ನು ದುರ್ಬಳಕೆ ಮಾಡಿಕೊಂಡು ಬೇಕಾಬಿಟ್ಟಿ ಓಡಾಡುತ್ತಿದ್ದಾರೆ.

ಬೆಳಗ್ಗೆ 10 ಗಂಟೆಯವರೆಗೆ ಎಲ್ಲ ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಮರೆತು, ಮಾಸ್ಕ್ ಹಾಕದೆ ಜನ ಮುಗಿ ಬಿದ್ದಿದ್ದರು. ಅಲ್ಲದೆ ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ತಮ್ಮ ಇತರೆ ಕೆಲಸಗಳಿಗಾಗಿ ಓಡಾಟ ನಡೆಸುತ್ತಿದ್ದಾರೆ. ಇದೇ ರೀತಿ ಮುಂದುವರಿದರೆ ಕೊರೊನಾ ನಿಯಂತ್ರಣಕ್ಕೆ ಬರದೆ ಜೂನ್ 20ರ ಬಳಿಕವೂ ಲಾಕ್‍ಡೌನ್ ವಿಸ್ತರಣೆ ಮಾಡುವ ಸಾಧ್ಯತೆ ಇದೆ.

Comments

Leave a Reply

Your email address will not be published. Required fields are marked *