ಉಗ್ರರ ಸಂಚು ವಿಫಲಗೊಳಿಸಿದ ಭದ್ರತಾ ಸಿಬ್ಬಂದಿ

-ಐಇಡಿ ಬಾಂಬ್ ನಿಷ್ಕ್ರಿಯ

ಶ್ರೀನಗರ: ಉಗ್ರರ ದೊಡ್ಡ ಸಂಚನ್ನು ಕಾಶ್ಮೀರದ ಭದ್ರತಾ ಸಿಬ್ಬಂದಿ ವಿಫಲಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉತ್ತರ ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಪಟ್ಟನ್ ವ್ಯಾಪ್ತಿಯ ಟಾಪರ್ ಗ್ರಾಮದ ರಸ್ತೆ ಬಳಿ ಸ್ಫೋಟಕ ವಸ್ತು ಪತ್ತೆಯಾಗಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳ ಇರಿಸಲಾಗಿದ್ದ ಐಇಡಿಯನ್ನ ಡಿಫ್ಯೂಸ್ ಮಾಡಿದ್ದಾರೆ.

ಉಗ್ರರು ಪೆಟ್ರೋಲ್ ಪಂಪ್ ಬಳಿಯ ರಸ್ತೆಯಲ್ಲಿ ಬಾಂಬ್ ಇರಿಸಿದ್ದರು. ಸ್ಫೋಟದ ತೀವ್ರತೆ ಹೆಚ್ಚಾಗುವ ಉದ್ದೇಶದಿಂದ ಪೆಟ್ರೋಲ್ ಪಂಪ್ ಸ್ಥಳವನ್ನು ಗುರುತಿಸಿರುವ ಸಾಧ್ಯತೆಗಳಿವೆ. ಸರಿಯಾದ ಸಮಯಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳ ಐಇಡಿಯನ್ನು ಡಿಫ್ಯೂಜ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರ್ಟಿಕಲ್ 370 ರದ್ದುಗೊಳಿಸಿ ಆಗಸ್ಟ್ 5ಕ್ಕೆ ಒಂದು ವರ್ಷವಾಗಲಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಜಮ್ಮು ಕಾಶ್ಮೀರದಲ್ಲಿ ಎರಡು ದಿನ ಕರ್ಫ್ಯೂ ವಿಧಿಸಲಾಗಿದೆ. ಕಾಶ್ಮೀರ ಪ್ರತ್ಯೇಕವಾದಿಗಳಿಂದ ಪ್ರತಿಭಟನೆ ನಡೆಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕರ್ಫ್ಯೂ ಹಾಕಲಾಗಿದೆ,

Comments

Leave a Reply

Your email address will not be published. Required fields are marked *