ಎಂ.ಸಿ ಮನಗೂಳಿ ನಿಧನಕ್ಕೆ ಜೆಡಿಎಸ್ ವರಿಷ್ಠ ಹೆಚ್‍ಡಿಡಿ ಸಂತಾಪ

ಬೆಂಗಳೂರು: ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ(85) ನಿಧನರಾಗಿದ್ದು, ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್‍ಡಿಡಿ, ರಾಜಕೀಯ ಮತ್ತು ವೈಯಕ್ತಿಕವಾಗಿ ನನ್ನ ಹಲವು ದಶಕಗಳ ಒಡನಾಡಿಯಾಗಿದ್ದ ಮಾಜಿ ಸಚಿವ, ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಭಗವಂತ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಬರೆದುಕೊಂಡಿದ್ದಾರೆ.

ವಯೋಸಹಜ ಕಾಯಿಲೆ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮನಗೂಳಿ ಅವರು 15 ದಿನದ ಹಿಂದೆ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. 1994ರಲ್ಲಿ ಸಚಿವರಾಗಿದ್ದ ಮನಗೂಳಿ 2018ರಲ್ಲಿ ತೋಟಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿದ್ದರು. ಸಿಂದಗಿ ಕ್ಷೇತ್ರದಿಂದ 7 ಬಾರಿ ಸ್ಪರ್ಧೆ, 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

Comments

Leave a Reply

Your email address will not be published. Required fields are marked *