ಒಂದೇ ತಂಡದ ಪರ ಕ್ರಿಕೆಟ್ ಆಡಲಿದ್ದಾರೆ ಯುವರಾಜ್, ಗೇಲ್, ಎಬಿಡಿ

ಸಿಡ್ನಿ: ಭಾರತದ ತಂಡದ ಮಾಜಿ ಅಟಗಾರ ಯುವರಾಜ್ ಸಿಂಗ್, ವೆಸ್ಟ್ ಇಂಡೀಸ್‍ನ ಕ್ರಿಸ್ ಗೇಲ್ ಮತ್ತು ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಆಸ್ಟ್ರೇಲಿಯಾದ ಕ್ರಿಕೆಟ್ ಕ್ಲಬ್ ಪರ ಒಂದೇ ತಂಡದಲ್ಲಿ ಆಡುವ ಕುರಿತು ವರದಿಯಾಗಿದೆ.

ಸ್ಟಾರ್ ಕ್ರಿಕೆಟರ್‍ ಗಳಾಗಿ ಮಿಂಚಿರುವ ಈ ಮೂರು ಆಟಗಾರರಲ್ಲಿ ಯುವರಾಜ್ ಸಿಂಗ್ ಮತ್ತು ಎಬಿಡಿ ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ನೀಡಿದ್ದಾರೆ. ಗೇಲ್ ಮಾತ್ರ ಸದ್ಯ ವೆಸ್ಟ್ ಇಂಡೀಸ್ ತಂಡದ ಪರ ಆಡುತ್ತಿದ್ದಾರೆ. ಇದೀಗ ಈ ಮೂರು ಆಟಗಾರರು ಕೂಡ ಆಸ್ಟ್ರೇಲಿಯಾದ ಮೆಲ್ಬರ್ನ್‍ನ ಕ್ರಿಕೆಟ್ ಕ್ಲಬ್ ಪರ ಜೊತೆಯಾಗಿ ಆಡುವ ಸಾಧ್ಯತೆಗಳಿವೆ ಎಂದು ಮುಲ್ಗ್ರೇವ್ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಮಿಲನ್ ಪುಲ್ಲನಾಯೆಗಮ್ ಹೇಳಿಕೆ ನೀಡಿದ್ದಾರೆ. ದನ್ನೂ ಓದಿ: ಸೆಪ್ಟೆಂಬರ್‌ನಿಂದ ನಡೆಯಲಿವೆ ಮುಂದೂಡಲ್ಪಟ್ಟ ಐಪಿಎಲ್ ಪಂದ್ಯಗಳು- ಬಿಸಿಸಿಐ ಘೋಷಣೆ

ಸನತ್ ಜಯಸೂರ್ಯ ಕ್ಲಬ್ ತಂಡದಲ್ಲಿ ಕಾರ್ಯನಿರ್ವಹಿಸುವುದು ಈಗಾಗಲೇ ಖಚಿತವಾಗಿದ್ದು, ಶ್ರೀಲಂಕಾದ ತಿಲಕರತ್ನೆ ದಿಲ್ಶನ್, ಉಪುಲ್ ತರಂಗಾ ಸೇರಿದಂತೆ ನಾವು ಇತರ ಕೆಲವು ಪ್ರಮುಖ ಆಟಗಾರರೊಂದಿಗೆ ಒಪ್ಪಂದಗಳನ್ನು ಅಂತಿಮಗೊಳಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮ ಕ್ಲಬ್ ಪರ ಆಡಲು ಕೆಲ ಆಟಗಾರರನ್ನು ಕರೆತರಲು ಹಲವು ಪ್ರಯತ್ನಗಳು ನಡೆಯುತ್ತಿವೆ ಎಂದು ಪುಲ್ಲೆನಾಯಗಮ್ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಐಪಿಎಲ್ ಬಳಿಕ ಯುಎಇನಲ್ಲಿ ಟಿ20 ವಿಶ್ವಕಪ್ ಫಿಕ್ಸ್?

ಮುಲ್ಗ್ರೇವ್ ಕ್ರಿಕೆಟ್ ಕ್ಲಬ್ ಈಗಾಗಲೇ ಶ್ರೀಲಂಕಾದ ದಿಲ್ಶನ್ ಮತ್ತು ತರಂಗಾ ಅವರನ್ನು ಕ್ಲಬ್ ಪರ ಆಡಲು ಸಂಪರ್ಕಿಸಿದೆ. ಮುಂದಿನ ಬೇಸಿಗೆಯಲ್ಲಿ ಸನತ್ ಜಯಸೂರ್ಯ ಅವರ ಮಾರ್ಗದರ್ಶನದಲ್ಲಿ ಕ್ಲಬ್ ತಂಡ ರೂಪುಗೊಳ್ಳಲಿದೆ. ಜಯಸೂರ್ಯ ಈ ಕ್ಲಬ್ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಇವರೊಂದಿಗೆ ಬ್ರಿಯಾನ್ ಲಾರಾ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ನೇಮಿಸಲು ಅವರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮವೊಂದು ಸುದ್ದಿ ಬಿತ್ತರಿಸಿದೆ.

Comments

Leave a Reply

Your email address will not be published. Required fields are marked *