ಕಡೆಗೂ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ರಾಜೀನಾಮೆ ನೀಡಿದ್ದಾರೆ.

ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಔಟ್ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ ಬೆನ್ನಲ್ಲೇ ಇದೀಗ ರಾಜೀನಾಮೆ ನೀಡಲು ಒಪ್ಪಿಕೊಂಡಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ಕೆಪಿಟಿಸಿಎಲ್‍ನಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿ ಸಂತ್ರಸ್ತ ಯುವತಿಯನ್ನು ಕಾಮಕ್ರಿಯೆಗೆ ಬಳಸಿಕೊಂಡಿರುವುದಾಗಿ ದೂರು ಕೊಡಲಾಗಿತ್ತು.  ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಅವರು ನಿನ್ನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಲ್ಲದೆ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಪಿ ಅನುಚೇತ್, ಸಂತ್ರಸ್ತೆಯ ಹೇಳಿಕೆ ಪಡೆದ ಮೇಲಷ್ಟೇ ಎಫ್‍ಐಆರ್ ದಾಖಲಿಸುವುದಾಗಿ ತಿಳಿಸಿದ್ದರು.

ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಭೇಟಿ ಬಳಿಕ ಮಾತನಾಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಇದು ತುಂಬಾ ಸೂಕ್ಷ್ಮವಾದ ವಿಚಾರ ಆಗಿರುವ ಕಾರಣ ಬಹಿರಂಗಪಡಿಸಲು ಸಾಧ್ಯವಿಲ್ಲ. ಸಂತ್ರಸ್ತೆಗೆ ಭಾರೀ ಪ್ರಮಾಣದಲ್ಲಿ ಬೆದರಿಕೆ ಕರೆಗಳು ಬರುತ್ತಿವೆ. ಒಂದೆರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಬಳಿಕ ಬೆದರಿಕೆ ಕರೆಗಳು ಬರುತ್ತಿವೆ. ಹೀಗಾಗಿ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಕ್ರಮ ಕೈಗೊಳ್ಳುವ ಭರವಸೆ ಇದೆ. ಆಯುಕ್ತರನ್ನು ಭೇಟಿ ಮಾಡಿದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ತಿಳಿಸಿದ್ದಾರೆ. ಹೀಗಾಗಿ ದೂರು ನೀಡಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳುತ್ತಿದ್ದೇನೆ ಎಂದು ಹೇಳಿದ್ದರು.

ಕುಟುಂಬದ ಸದಸ್ಯರೊಬ್ಬರು ಆಗಮಿಸಿ ಸೋಮವಾರ ನನಗೆ ಸಿಡಿ ನೀಡಿದರು. ಕಿರು ಚಿತ್ರ ನಿರ್ಮಾಣಕ್ಕೆಂದು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದಾಗ ಕೆಪಿಟಿಸಿಎಲ್‍ನಲ್ಲಿ ಕೆಲಸ ನೀಡುವುದಾಗಿ ಹೇಳಿಕೆ ನೀಡಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಹಲವು ಪ್ರಕರಣಗಳಲ್ಲಿ ನನಗೆ ತುಂಬಾ ನೋವು ಕೊಟ್ಟಿದ್ದಾರೆ. ನನ್ನಿಂದ ಅವರ ವಿರುದ್ಧ ಹೋರಾಟ ಮಾಡಲು ಆಗುತ್ತಿಲ್ಲ. ನ್ಯಾಯ ಕೊಡಿಸಿ ಎಂದು ನನ್ನ ಬಳಿ ಮನವಿ ಮಾಡಿದರು. ನಾನು ನಮ್ಮ ವಕೀಲರ ಜೊತೆ ಚರ್ಚೆ ನಡೆಸಿ, ಇದೀಗ ದೂರು ನೀಡಲು ಬಂದಿದ್ದೇನೆ ಎಂದು ದಿನೇಶ್ ತಿಳಿಸಿದ್ದರು.

Comments

Leave a Reply

Your email address will not be published. Required fields are marked *