ಕನ್ನಡ ನಿಘಂಟು ತಜ್ಞ ಪ್ರೊ.ಜಿ ವೆಂಕಟಸುಬ್ಬಯ್ಯ ಇನ್ನಿಲ್ಲ

ಬೆಂಗಳೂರು: ಕನ್ನಡ ಮತ್ತೊಂದು ಅಮೂಲ್ಯ ರತ್ನವೊಂದು ಮರೆಯಾಗಿದೆ. ನಿಘಂಟು ತಜ್ಞ ಪ್ರೊ. ಜಿ ವೆಂಕಟಸುಬ್ಬಯ್ಯ ವಿಧಿವಶರಾಗಿದ್ದಾರೆ.

ಪದ್ಮಶ್ರೀ ಪ್ರೊ. ವೆಂಕಟಸುಬ್ಬಯ್ಯ(108) ಅವರು ಮಧ್ಯರಾತ್ರಿ 1.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಮೂತ್ರ ನಾಳದ ಸೋಂಕಿನಿಂದ ಬಳಲುತ್ತಿದ್ದ ಜಿ. ವೆಂಕಟಸುಬ್ಬಯ್ಯ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಎಂಟು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಮೂತ್ರ ನಾಳದ ಸೋಂಕಿನಿಂದ ಗುಣಮುಖರಾಗಿದ್ದ ಕಾರಣ ವೈದ್ಯರು ಇಂದು ಡಿಸ್ಚಾರ್ಜ್ ಮಾಡುವ ಮಾಹಿತಿ ನೀಡಿದ್ದರು. ಆದರೆ ತಡರಾತ್ರಿ ಮೃತಪಟ್ಟಿದ್ದಾರೆ.

1913 ಆಗಸ್ಟ್ 23 ರಂದು ಮೈಸೂರಿನಲ್ಲಿ ಜನಿಸಿದ ಇವರು, ಪದ್ಮಶ್ರೀ, ನಾಡೋಜ, ಪಂಪ ಪ್ರಶಸ್ತಿ, ಭಾಷಾ ಸಮ್ಮಾನ್ ಪುರಸ್ಕೃತರಾಗಿದ್ದರು. ಕನ್ನಡದ ಏಳಿಗೆಗಾಗಿ ದುಡಿದವರಾಗಿದ್ದು, ಭಾಷಾ ತಜ್ಞ, ಸಂಶೋಧಕ, ಬರಹಗಾರ, ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡದ ನಿಘಂಟು ಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *