– ಡಿಕೆಶಿ ರಾಜಕೀಯ ಅಂತ್ಯಕಾಣುತ್ತಾರೆ
– ಸಿದ್ದರಾಮಣ್ಣಗೆ ರೈತಪರ ಮಾತಾಡುವ ನೈತಿಕ ಹಕ್ಕಿಲ್ಲ
ಚಿತ್ರದುರ್ಗ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಶೀಘ್ರ ರಾಜಕೀಯ ಅಂತ್ಯ ಕಾಣಲಿದ್ದಾರೆ. ಮೊನ್ನೆ ಜೈಲಿಂದ ಬಂದಾಗ ಡಿಕೆಶಿ ಮೆರವಣಿಗೆ ಮೂಲಕ ಬಂದಿದ್ದಾರೆ. ಎಲ್ಲಿಂದ ಬಂದಿದ್ದಾರೋ ಮತ್ತೆ ಡಿಕೆಶಿ ಅಲ್ಲಿಗೆ ಹೋಗ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಹೇಳಿದ್ದಾರೆ.

ಅಧಿಕಾರ ಇಲ್ಲದಾಗ ಕಾಂಗ್ರೆಸ್ ಪಕ್ಷ ಬೆಂಕಿ ಹಾಕುವ ಕೆಲಸವನ್ನು ಮಾಡುತ್ತದೆ. ಕಾಂಗ್ರೆಸ್ ಅಧಿಕಾರವಿದ್ದಾಗ ವಿಪಕ್ಷಗಳನ್ನು ಮಣಿಸುವ ನೀತಿಯನ್ನು ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರ ಇಲ್ಲದಾಗ ಅಶಾಂತಿ, ಗಲಭೆ ಸೃಷ್ಟಿಸುತ್ತಿದೆ. ಸಿಎಎ ಜಾರಿ ಸಂದರ್ಭದಲ್ಲೂ ಕಾಂಗ್ರೆಸ್ ನಿಂದ ಗಲಾಟೆಯಾಗಿತ್ತು. ಆಗ ಪಿಸ್ತೂಲ್ ಹಿಡಿದು ತಿರುಗಿದ್ದರು. ನಿನ್ನೆ ತಲವಾರ್ ಪ್ರದರ್ಶಿಸಿದ್ದಾರೆ. ಕಾಂಗ್ರೆಸ್ ವಿಚಾರ, ಸಿದ್ಧಾಂತ, ದೇಶವನ್ನೂ ಮರೆತಂತಿದೆ. ಕಾಂಗ್ರೆಸ್ ಅಧಿಕಾರಕ್ಕಾಗಿ ಭಯೋತ್ಪಾದಕ ಕೃತ್ಯಕ್ಕೆ ಇಳಿದಿದೆ ಎಂದು ಕಾಂಗ್ರೆಸ್ ವಿರುದ್ಧವಾಗಿ ಚಾಟಿ ಬೀಸಿದ್ದಾರೆ.

ಸಿದ್ದರಾಮಣ್ಣ ಅವರಿಗೆ ರೈತಪರ ಮಾತಾಡುವ ನೈತಿಕ ಹಕ್ಕಿಲ್ಲ. ಸಿಎಂ ಆಗಿದ್ದಾಗ ರಾಜ್ಯದಲ್ಲಿ 3 ಸಾವಿರ ರೈತರ ಆತ್ಮಹತ್ಯೆ ಮಾಡಿದ್ದಾರೆ. ಸಮಾಜವಾದದ ಹೆಸರಿನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಮಜಾ ಮಾಡಿದ್ದಾರೆ. ರೈತರ ಹೆಸರಿನಲ್ಲಿ ಪುಂಟಾಟ ದಾಂದಲೇ ಮಾಡುವುದು ಸರಿ ಅಲ್ಲ. ದೆಹಲಿ ದಾಂಧಲೆ ಪ್ರಕರಣದ ಬಗ್ಗೆ ತನಿಖೆ, ಕ್ರಮ ಆಗಬೇಕು. ಕೆಂಪುಕೋಟೆ ಮೇಲೆ ದಾಳಿ ಮಾಡಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವುದು ಸರಿಯಲ್ಲ. ಕೆಲ ರಾಜಕೀಯ ಪಕ್ಷಗಳು ರೈತರ ದಿಕ್ಕು ತಪ್ಪಿಸುತ್ತೀವೆ. ದೇಶದ ರೈತರು ಈ ಬಗ್ಗೆ ಗಮನ ಹರಿಸಬೇಕು. ರೈತರ ಹೆಸರಿನಲ್ಲಿ ಅಶಾಂತಿ ನಿರ್ಮಾಣ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Live : ಚಿತ್ರದುರ್ಗದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ @nalinkateel https://t.co/wV3bgVJDso
— BJP Karnataka (@BJP4Karnataka) January 27, 2021

Leave a Reply