ಮೈಸೂರು: ಕೆಎಸ್ಆರ್‌ಟಿಸಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕಿನಲ್ಲಿದ್ದ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹುಣಸೂರಿನ ಯಶೋಧಪುರ ಗ್ರಾಮದಲ್ಲಿ ನಡೆದಿದೆ.

ಮೃತ ದುರ್ದೈವಿಗಳನ್ನು ಶಿವರಾಜ್ ಗೌಡ(32), ಹಿಂಬದಿ ಸವಾರ ಕಾರ್ತಿಕ್ ಎಂದು ಗುರುತಿಸಲಾಗಿದೆ. ಘಟನೆಗೆ ಅತಿಯಾದ ವೇಗವೇ ಕಾರಣ ಎಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.

ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Leave a Reply