ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಮತ್ತೆ ಸಿಬಿಐ ಶಾಕ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಶಾಕ್ ನೀಡಿದೆ. ನವೆಂಬರ್ 23ರಂದು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ.

ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಸಿಬಿಐ ಸಮನ್ಸ್ ನೀಡಿದೆ. ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೈ ಎಲೆಕ್ಷನ್ ತಯಾರಿಯಲ್ಲಿದ್ದ ಡಿ.ಕೆ.ಶಿವಕುಮಾರ್ ಸಿಬಿಐ ಸೋಮವಾರ ವಿಚಾರಣೆಗೆ ಬನ್ನಿ ಎಂದು ಹೇಳಿದೆ.

ಸಮನ್ಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಬೆಂಗಳೂರಿನ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದು ನಿಜ. ನವೆಂಬರ್ 19ರಂದು ಅಧಿಕಾರಿಗಳು ನಮ್ಮ ಮನೆಗೆ ನೋಟಿಸ್ ನೀಡಲು ಬಂದಿದ್ದರು. ಆದ್ರೆ ನಾನು ಮನೆಯಲ್ಲಿರಲಿಲ್ಲ. ನವೆಂಬರ್ 23 ಸಂಜೆ ನಾಲ್ಕು ಗಂಟೆಗೆ ಕಚೇರಿಗೆ ಬರಲು ಸೂಚಿಸಿದ್ದಾರೆ. ಆದ್ರೆ ನಾನು ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳಿಗೆ ತೆರಳುತ್ತಿದ್ದೇನೆ. ಹೀಗಾಗಿ ನವೆಂಬರ್ 23ರ ಬದಲಾಗಿ ನವೆಂಬರ್ 25ಕ್ಕೆ ವಿಚಾರಣೆಗೆ ಬರೋದಾಗಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದೇನೆ ಎಂದು ಹೇಳಿದರು.

Comments

Leave a Reply

Your email address will not be published. Required fields are marked *