ಕೊಡಗಿನ ಪಟ್ಟಣ ಪಂಚಾಯತ್ ಅಧ್ಯಕ್ಷೆ ಕೊರೊನಾಗೆ ಬಲಿ

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಪಟ್ಟಣ ಪಂಚಾಯತಿ ಅಧ್ಯಕ್ಷೆ ನಳಿನಿ ಗಣೇಶ್ ಕೊರೊನಾ ಮಾಹಾಮಾರಿಗೆ ಬಲಿಯಾಗಿದ್ದಾರೆ.

2020ರ ನವೆಂಬರ್‍ ನಲ್ಲಿ ಸೋಮವಾರಪೇಟೆ ಪಟ್ಟಣ ಪಂಚಾಯತ್ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದ ನಳಿನಿ ಗಣೇಶ್ ಅವರು. ಸೋಮವಾರಪೇಟೆ ತಾಲೂಕು ಜಾನಪದ ಪರಿಷತ್‍ನ ನಿರ್ದೇಶಕಿ ಕೂಡ ಆಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದ ಬಳಿಕ ಮಡಿಕೇರಿಯ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಳಿನಿ ಗಣೇಶ್ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಡುತ್ತಿತ್ತು. ಬಳಿಕ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಅಪ್ಪಚ್ಚು ರಂಜನ್ ಸಂತಾಪ
ನಳಿನಿ ಗಣೇಶ್ ಅವರ ಅಕಾಲಿಕ ನಿಧನಕ್ಕೆ ಮಡಿಕೇರಿ ಶಾಸಕ ಎಂ.ಪಿ ಅಪ್ಪಚ್ಚುರಂಜನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಅಗಲಿಕೆಯ ಶೋಕವನ್ನು ತಡೆದುಕೊಳ್ಳುವ ಶಕ್ತಿ ಕುಟುಂಬವರ್ಗಕ್ಕೆ ದೊರಕಲಿ ಎಂದು ಅಪ್ಪಚ್ಚು ರಂಜನ್ ಹಾಗೂ ಬಿಜೆಪಿ ಕಾರ್ಯಕರ್ತರು ಸೋಮವಾರಪೇಟೆ ಪಟ್ಟಣ ಪಂಚಾಯತಿ ಸದಸ್ಯರು ಸಂತಾಪ ಸೂಚಿಸಿದ್ದಾರೆ.

Comments

Leave a Reply

Your email address will not be published. Required fields are marked *