ಕೊಪ್ಪಳದಲ್ಲಿ ತಲೆ ಎತ್ತಲಿದೆ ಬೃಹತ್ ಗೊಂಬೆ ತಯಾರಿಕಾ ಕ್ಲಸ್ಟರ್

ಬೆಂಗಳೂರು: ಕೇಂದ್ರದ ಆತ್ಮನಿರ್ಭರ್ ಭಾರತ್ ಯೋಜನೆಯಡಿ ಬೃಹತ್ ಗೊಂಬೆಗಳ ತಯಾರಿಕಾ ಕ್ಲಸ್ಟರ್ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಕೇಂದ್ರದ ಆತ್ಮನಿರ್ಭರ್ ಭಾರತ್ ಯೋಜನೆಯಡಿ ಕೊಪ್ಪಳದಲ್ಲಿ ಬೃಹತ್ ಗೊಂಬೆ ತಯಾರಿಕಾ ಕ್ಲಸ್ಟರ್ ತಲೆ ಎತ್ತಲಿದೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣದ ಬಗ್ಗೆ ‘ಮನ್ ಕಿ ಬಾತ್’ನಲ್ಲಿ ಮೋದಿ ಮಾತು

ಮೊದಲಿಗೆ “ಸ್ವಾವಲಂಬಿ ರಾಷ್ಟ್ರ ನಿರ್ಮಾಣದ ಪ್ರಧಾನಿ ನರೇಂದ್ರ ಮೋದಿಯವರ #VocalForLocal ಪರಿಕಲ್ಪನೆಗೆ ಅನುಗುಣವಾಗಿ, ಆಟಿಕೆ ತಯಾರಿಕೆ ಮೂಲಕ ಆರ್ಥಿಕತೆ ಹಾಗೂ ಉದ್ಯೋಗಸೃಷ್ಟಿಗೆ ಬಲ ತುಂಬಲು ದೇಶದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಕೊಪ್ಪಳದಲ್ಲಿ ಪ್ರಾರಂಭಿಸಲಾಗುತ್ತಿದೆ. ಇಲ್ಲಿ ದೇಶವಿದೇಶಗಳ ಆಟಿಕೆ ತಯಾರಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು” ಎಂದು ತಿಳಿಸಿದ್ದಾರೆ.

ಕೊಪ್ಪಳದಲ್ಲಿ 400 ಎಕರೆ ಜಮೀನಿನಲ್ಲಿ ವಿಶೇಷ ಆರ್ಥಿಕ ವಲಯದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ. ಇದು ಮುಂದಿನ ಐದು ವರ್ಷಗಳಲ್ಲಿ 40 ಸಾವಿರ ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆ ಇದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

Comments

Leave a Reply

Your email address will not be published. Required fields are marked *