ಕೊರೊನಾಗೆ ನಗರಸಭೆ ಸದಸ್ಯ ಬಲಿ – ಜನರಲ್ಲಿ ಆತಂಕ

ಚಿತ್ರದುರ್ಗ: ಕೋವಿಡ್ ಸೋಂಕಿನಿಂದಾಗಿ ನಗರಸಭೆ ಸದಸ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.

ಮೃತ ವ್ಯಕ್ತಿಯು 40 ವರ್ಷದವರಾಗಿದ್ದು, ಹಿರಿಯೂರು ನಗರಸಭೆಯ ಕಾಂಗ್ರೆಸ್ ಸದಸ್ಯರಾಗಿದ್ದರು. ಮೃತ ಸದಸ್ಯ ಆಗಸ್ಟ್ 07 ರಂದು ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ರಾತ್ರಿ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗದಿಂದ ಬೆಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಮೃತರು ಕಳೆದ ಬಾರಿ ಪಕ್ಷೇತರರಾಗಿ ಗೆದ್ದು ಉತ್ತಮ ಸೇವೆ ಮಾಡಿದ್ದರು. ಈ ಬಾರಿ ಕಾಂಗ್ರೆಸ್‍ನಿಂದ ಟಿಕೆಟ್ ಪಡೆದು ಎರಡನೇ ಬಾರಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಸರಳದಿಂದ ಎಲ್ಲರ ಸ್ನೇಹಗಳಿಸಿ, ಸ್ನೇಹ ಜೀವಿ ಎನ್ನಿಸಿದ್ದ ಇವರು, ವಾರ್ಡಿನಲ್ಲಿ ಅಪಾರ ಸೇವೆ ಮಾಡಬೇಕೆಂದುಕೊಂಡಿದ್ದರು. ಆದರೆ  ಕೊರೊನಾಗೆ ಬಲಿಯಾಗಿದ್ದಾರೆ.

Comments

Leave a Reply

Your email address will not be published. Required fields are marked *