ಕೊರೊನಾ ವಾರಿಯರ್ಸ್‍ಗೆ ಊಟದ ಬಾಕ್ಸ್ ವಿತರಿಸಿದ್ರು ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಮಹಾಮಾರಿ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿದ ಕೊರೊನಾ ವಾರಿಯರ್ಸ್‍ಗಳಾದ ಪೊಲೀಸ್ ಸಿಬ್ಬಂದಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಊಟದ ಡಬ್ಬಿಯನ್ನು ನೀಡಿ ಗೌರವಿಸಿದರು.

ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಸಿಬ್ಬಂದಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಊಟದ ಬಾಕ್ಸ್ ನೀಡಿ ಗೌರವಿಸಲಾಯಿತು. ಇದೇ ವೇಳೆ ಮಾತನಾಡಿದ ಅವರು, ಚಿಟಗುಪ್ಪಿ ಕಾಲೋನಿಯ ಜನತೆಯ ಸಹಯೋಗದಲ್ಲಿಂದು ಲಾಕ್ ಡೌನ್ ಸಂದಿಗ್ಧ ಪರಿಸ್ಥಿತಿಯಲ್ಲಿಯು ಕೂಡ ಕಾರ್ಯನಿರ್ವಹಿಸಿದ ಪೊಲೀಸರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಊಟವನ್ನು ವಿತರಣೆ ಮಾಡುವ ಸದುದ್ದೇಶದಿಂದ ಈ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇದೇ ವೇಳೆ ಬಿಜೆಪಿಯಲ್ಲಿ ಬುಗೆಲಿದ್ದಿರುವ ನಾಯಕತ್ವ ಬದಲಾವಣೆ ಕುರಿತು ಮಾತನಾಡಿದ ಅವರು, ಕೋರೊನಾ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಕುರಿತು ಭಿನ್ನಮತ ಸ್ಫೋಟಗೊಂಡಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿ ರಾಜಕೀಯ ಆಂತರಿಕ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ ಎಂದ ಅವರು, ಯಾರು ರಾಜಿನಾಮೆ ನೀಡಿ ಬಂದರೂ ಕೂಡ ಜೆಡಿಎಸ್ ಅವರನ್ನು ಒಳಗೆ ಸೇರಿಸಿಕೊಳ್ಳುವುದಿಲ್ಲ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

Comments

Leave a Reply

Your email address will not be published. Required fields are marked *