ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿರೋದು ಆತಂಕ ತಂದಿದೆ: ಸುಧಾಕರ್

ಚಿಕ್ಕಬಳ್ಳಾಪುರ: ಕೋರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದು ಆತಂಕ ತಂದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೇ ಸುಧಾಕರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿಗಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.90 ಕ್ಕೂ ಹೆಚ್ಚು ಮಂದಿಗೆ ರೋಗದ ಲಕ್ಷಣಗಳು ಕಾಣಿಸುತ್ತಿಲ್ಲ. ತೀವ್ರತರವಾದ ದುಷ್ಪರಿಣಾಮ ಬೀರದೇ ಇರುವುದು ಸಮಾಧಾನಕರ ವಿಚಾರವಾಗಿದೆ. ಹಿರಿಯರು ಹಾಗೂ ಕಾಯಿಲೆಗಳು ಇರುವವರನ್ನ ಜೋಪಾನವಾಗಿ ನೋಡಿಕೊಳ್ಳಬೇಕು. ಅವರು ಮುಂಜಾಗ್ರತಾ ಕ್ರಮಗಳನ್ನ ವಹಿಸಿದರೆ ಕೊರೊನಾದಿಂದ ಪಾರಾಗಬಹುದು ಎಂದರು.

ರಾಜ್ಯಸರ್ಕಾರದಿಂದ ಹೊಸ ಮಾರ್ಗಸೂಚಿಗಳನ್ನ ಕೊಡುತ್ತಿದ್ದೇವೆ. ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡಲಾಗುತ್ತಿದೆ. ಕೊರೊನಾ ಪಾಸಿಟಿವ್ ಆಗಿದ್ದು ರೋಗದ ಲಕ್ಷಣ ಇಲ್ಲದವರಿಗೆ ಚಿಕಿತ್ಸೆ ನೀಡಲಾಗುತ್ತದೆ. ಲಕ್ಷಣ ಇರುವವರಿಗೆ ಸಾಮಾನ್ಯ ಆಸ್ಪತ್ರೆಗಳಲ್ಲೇ ಚಿಕಿತ್ಸೆ ಕೊಡಿಸಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲೂ ಸಹ ಕೋವಿಡ್ 19ಗೆ ಚಿಕಿತ್ಸೆ ಸಿಗಬೇಕು. ಅದಕ್ಕೂ ಸಹ ಮಾರ್ಗಸೂಚಿ ಸಿದ್ಧಪಡಿಸಿದ್ದೇವೆ ಎಂದು ತಿಳಿಸಿದರು.

Comments

Leave a Reply

Your email address will not be published. Required fields are marked *