ನವದೆಹಲಿ: ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಕೊರೊನಾ ಗಣನೀಯ ಏರಿಕೆಯ ನಡುವೆ ಒಳ್ಳೆ ಸುದ್ದಿಯೊಂದು ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ಕೊರೊನಾದಿಂದ ಗುಣಮುಖವಾಗುತ್ತಿರುವ ಪ್ರಮಾಣ ಶೇ.51 ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿರುವ ಮಾಹಿತಿ ಪ್ರಕಾರ ಭಾರತದಲ್ಲಿ 3,32,424 ಮಂದಿಯಲ್ಲಿ ಈವರೆಗೂ ಸೋಂಕು ಕಂಡು ಬಂದಿದೆ. ಈ ಪೈಕಿ 1,69,797 ಮಂದಿ ಚೇತರಿಸಿಕೊಂಡು ಗುಣಮುಖವಾಗಿದ್ದಾರೆ. ಸದ್ಯ 1,53,106 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸರ್ಕಾರದ ಈ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಸಕ್ರಿಯ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳು ಹೆಚ್ಚಿದ್ದು, ಈ ಪ್ರಮಾಣ ಶೇ. 51 ಆಗಿದೆ. ಗುಣಮುಖವಾಗುವವರ ಸಂಖ್ಯೆ ಹಂತ ಹಂತವಾಗಿ ಏರಿಕೆ ಕಾಣುತ್ತಿದ್ದು ಭಾರತದ ಮಟ್ಟಿಗೆ ಉತ್ತಮ ಬೆಳವಣಿಗೆಯಾಗಿದೆ.

Leave a Reply