ಕೊರೊನಾ ಹೆಚ್ಚಾಗಲು ಜವಾಬ್ದಾರಿ ಸ್ಥಾನದಲ್ಲಿರುವವರೇ ಕಾರಣ: ಉಡುಪಿ ಡಿಸಿ

ಉಡುಪಿ: ಜವಾಬ್ದಾರಿ ಸ್ಥಾನದಲ್ಲಿರುವವರು ಮೊದಲು ಕೊರೊನಾ ಮಾರ್ಗಸೂಚಿ ಅನುಸರಿಸಬೇಕು. ಜನಪ್ರತಿನಿಧಿಗಳು, ಅಧಿಕಾರಿಗಳು ಕೊರೊನಾ ಮಾರ್ಗಸೂಚಿಯನ್ನು ಪಾಲಿಸಿ ಜನಕ್ಕೆ ಮಾದರಿಯಾಗಬೇಕು ಎಂದು ಉಡುಪಿ ಡಿಸಿ ಬೇಸರದ ಮಾತುಗಳನ್ನಾಡಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಡಿಸಿ ಜಿ. ಜಗದೀಶ್ ಅವರು, ಸಾರ್ವಜನಿಕರು ಕೊರೊನಾ ಮಾರ್ಗಸೂಚಿ ಪಾಲಿಸಬೇಕಾದರೆ ಮೊದಲು ಜನ ಪ್ರತಿನಿಧಿಗಳು, ಅಧಿಕಾರಿಗಳು ಸಂಘ-ಸಂಸ್ಥೆಗಳು ನಿಯಮವನ್ನು ಪಾಲಿಸಬೇಕು. ಸಭೆ, ಸಮಾರಂಭ ಮಾಡುವುದನ್ನು ನಿಲ್ಲಿಸಬೇಕು. ಕೊರೊನಾ ಉತ್ತುಂಗಕ್ಕೆ ಹೋದನಂತರ ಎಚ್ಚೆತ್ತುಕೊಂಡರೆ ಉಪಯೋಗ ಇಲ್ಲ ಎಂದರು.

ಉಡುಪಿ ಜಿಲ್ಲೆಯಲ್ಲಿ ಎರಡನೆಯ ಅಲೆ ಇನ್ನೂ ಮುಕ್ತಾಯ ಆಗಿಲ್ಲ. ಜನರಲ್ಲಿ ಕೊರೊನಾ ಹೋಗಿದೆ ಎಂಬ ಭಾವನೆ ಬಂದಿದೆ. ನೂರಾರು ಜನ ಸೇರುವ ಕಾರ್ಯಕ್ರಮಗಳು ನಡೆಯುತ್ತಿದೆ. ಇದು ಸರಿಯಲ್ಲ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳ ಜೊತೆ ಮಾತನಾಡಿದ್ದೇನೆ, ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾಸ್ಕ್ ಇಲ್ಲದವರಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು. ಇದನ್ನೂ ಓದಿ: ಬಿಎಸ್‍ವೈ ಮಾತನ್ನೇ ಬಿಜೆಪಿ ಹೈಕಮಾಂಡ್ ಕೇಳಲಿಲ್ಲ, ಜನತಾದಳ ಮೂಲದ ಬೊಮ್ಮಾಯಿ ಮಾತು ಕೇಳುತ್ತಾರ? – ಸಿದ್ದರಾಮಯ್ಯ ಟೀಕೆ

ಉಡುಪಿ ಜಿಲ್ಲೆಯಾದ್ಯಂತ 1ತಿಂಗಳಿನಿಂದ ಪ್ರತಿದಿನ 100 ಪಾಸಿಟಿವ್ ಕೇಸ್ ಬರುತ್ತಿದೆ. ಜಿಲ್ಲೆಯ ಪಾಸಿಟಿವಿಟಿ ರೇಟ್ 3 ಶೇಕಡಾ ಆಸುಪಾಸಿನಲ್ಲಿದೆ. ಎರಡು ಮೂರು ದಿನದಿಂದ ಶೇಕಡಾ 5 ಪಾಸಿಟಿವಿಟಿ ರೇಟ್ ಬರುತ್ತಿದೆ. ಕೇರಳ ಮತ್ತು ಮಹಾರಾಷ್ಟ್ರದ ಜೊತೆ ಉಡುಪಿ ಜಿಲ್ಲೆ ಸಂಪರ್ಕದಲ್ಲಿರುವ ಕಾರಣ ಪಾಸಿಟಿವ್ ಸಂಖ್ಯೆ ಹೆಚ್ಚಾಗಲು ಕಾರಣ. ಪ್ರಾಥಮಿಕ ಸಂಪರ್ಕದಲ್ಲಿ ಅತಿ ಹೆಚ್ಚು ಸೋಂಕಿತರನ್ನು ಜಿಲ್ಲೆಯಲ್ಲಿ ಕಾಣಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಗರದಲ್ಲಿ ಕೋವಿಡ್ ಮೂರನೇ ಅಲೆ ಆರಂಭದ ಆತಂಕ- ಸೋಂಕಿತರ ಸಂಪರ್ಕಿತರಲ್ಲೂ ಹೆಚ್ಚಿದ ಪಾಸಿಟಿವ್ ಪ್ರಕರಣ

ಪಾಸಿಟಿವ್ ಸಂಖ್ಯೆ ಹೆಚ್ಚಾಗಿದ್ದರೂ ಕಾರ್ಯಕ್ರಮಗಳು ನಿರಂತರ ನಡೆಯುತ್ತಿದೆ, ಕಾರ್ಯಕ್ರಮ ಮಾಡುವವರೇ ಮೂರನೇ ಅಲೆಯ ಆಹ್ವಾನಕ್ಕೆ ಕಾರಣ ಆಗುತ್ತಾರೆ. ಕಾರ್ಯಕ್ರಮ ಮಾಡುವವರಿಂದ ಸಾಮಾನ್ಯ ಜನರ ಜೀವನಕ್ಕೆ ಕಷ್ಟವಾಗಲಿದೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣದ ಸಂಖ್ಯೆ ಈಗ ಸಾವಿರಕ್ಕೆ ಏರಿಕೆಯಾಗಿದೆ. ಜನ ಎಚ್ಚೆತ್ತುಕೊಳ್ಳಬೇಕು. ಸರ್ಕಾರದ ನಿಯಮಪಾಲಿಸಬೇಕು ಎಂದರು.

Comments

Leave a Reply

Your email address will not be published. Required fields are marked *