ಕೋಡಿ ಹಳ್ಳಿ ನಿವಾಸದಲ್ಲಿ ಡಿಕೆಶಿ ತಾಯಿ ವಿಚಾರಣೆ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಡಿಕೆ ಬ್ರದರ್ಸ್‍ಗೆ ಶಾಕ್ ನೀಡಿರುವ ಸಿಬಿಐ ಅಧಿಕಾರಿಗಳು ಇದೀಗ ಕನಕಪುರ ಬಂಡೆ ತಾಯಿಯನ್ನು ವಿಚಾರಣೆ ನಡೆಸಿದ್ದಾರೆ.

ಕೋಡಿಹಳಿಯಲ್ಲಿರುವ ನಿವಾಸದಲ್ಲಿ ಅಧಿಕಾರಿಗಳು ಹಾಗೂ ಡಿಕೆಶಿ ತಾಯಿ ಗೌರಮ್ಮ ಎದುಬದುರಾಗಿ ಕುಳೀತುಕೊಂಡು ವಿಚಾರಣೆ ಮಾಡಲಾಗುತ್ತಿದೆ. ಅಧಿಕಾರಿಗಳು ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಗೌರಮ್ಮ ಉತ್ತರಿಸಿದ್ದಾರೆ. ಕೊಡಿಹಳ್ಳಿಯ ನಿವಾಸದ ಮುಂದೆ ಕಾರ್ಯಕರ್ತರು ಜಮಾಯಿಸಿದ್ದಾರೆ.

ಬೆಳಗ್ಗೆ 6 ಗಂಟೆ ಸುಮಾರಿಗೆ ದೊಡ್ಡ ಆಲಹಳ್ಳಿಯ ಡಿಕೆಶಿ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಸತತ 6 ಗಂಟೆಗಳ ಕಾಲ ದಾಳಿ ಮಾಡಿರುವ ಅಧಿಕಾರಿಗಳು ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಚಾರಣೆ ಮುಕ್ತಾಯವಾಗಿದೆ. ಸಿಬಿಐ ಅಧಿಕಾರಿಗಳ ದಾಳಿ ವೇಳೆ ಡಿಕೆ ತಾಯಿಯ ಕಾರು ಡ್ರೈವರ್ ಉಮೇಶ್ ಮಾತ್ರ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಮಗಳ ಐಶ್ವರ್ಯವೇ ಮುಳುವಾಗುತ್ತಾ..?

ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ್ದ ಗೌರಮ್ಮ, ನನ್ನ ನನ್ನ ಮಗನನ್ನ ಕಂಡರೆ ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಪ್ರೀತಿ. ಅದಕ್ಕಾಗಿಯೇ ಪದೇ ಪದೇ ನಮ್ಮ ಮಗನನ್ನ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಸಿಬಿಐ ಅಧಿಕಾರಿಗಳ ಮೇಲೆ ತಮ್ಮ ಅಸಮಾಧಾನ ಹೊರಹಾಕಿದ್ದರು.  ಇದನ್ನೂ ಓದಿ: ಟ್ರಬಲ್ ಶೂಟರ್ ಇಂದು ಸಿಬಿಐಗೆ ಲಾಕ್ ಆಗಿದ್ದು ಹೇಗೆ?

ದೊಡ್ಡ ಆಲಹಳ್ಳಿ ಗ್ರಾಮದ ಮನೆಯಲ್ಲಿ ಪರಿಶೀಲನೆ ನಡೆಸಿ ಅಲ್ಲಿರುವ ಇಟ್ಟಿಗೆಗಳನ್ನು ತೆಗೆದುಕೊಂಡು ಹೋಗಲಿ. ಅವರಿಗೂ ಮಾಡೋಕೆ ಕೆಲಸವಿಲ್ಲ ಸುಮ್ಮನೆ ತಿರುಗುತ್ತಾರೆ. ಸುಮ್ಮನೆ ನಮ್ಮ ಹೊಟ್ಟೆ ಉರಿಸುತ್ತಾರೆ. ನಮ್ಮ ಮಗನನ್ನ ಅವರ ಮನೆಗೆ ಕರೆದುಕೊಂಡು ಕೂರಿಸಿಕೊಳ್ಳಲಿ. ಬೇಕಾದ್ರೆ ನಾನು ಹೋಗಿ ಕುಳಿತುಕೊಳ್ಳುತ್ತೇನೆ ಸಮಯಕ್ಕೆ ಸರಿಯಾಗಿ ಊಟ ಕೊಟ್ಟರೆ ಸಾಕು ಎಂದು ಹೇಳಿದ್ದರು. ಇದನ್ನೂ ಓದಿ: ಮನೆಯ ಇಟ್ಟಿಗೆಗಳನ್ನೂ ತೆಗೆದುಕೊಂಡು ಹೋಗಲಿ – ಸಿಬಿಐ ದಾಳಿಗೆ ಡಿಕೆಶಿ ತಾಯಿ ಗರಂ

Comments

Leave a Reply

Your email address will not be published. Required fields are marked *