ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರದಿಂದ 10 ನಿರ್ದೇಶನಗಳು

ನವದೆಹಲಿ: ಕೇಂದ್ರ ಸರ್ಕಾರ ಕೊರೊನಾ ಲಾಕ್‍ಡೌನ್ ಅನ್ನು ಜೂನ್ 30ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಜೊತೆಗೆ ಕೊರೊನಾ ನಿಯಂತ್ರಣಕ್ಕೆ ಪ್ರಮುಖ ಹತ್ತು ನಿರ್ದೇಶನಗಳನ್ನು ತಿಳಿಸಿದೆ.

ಲಾಕ್‍ಡೌನ್ 5.0ನಲ್ಲಿ ಪ್ರಮುಖವಾಗಿ ಮಾಲ್ ಹಾಗೂ ದೇವಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಮತಿ ನೀಡಲಾಗುತ್ತಿದೆ. ಈಗಾಗಲೇ ಕಂಪನಿ, ಕೈಗಾರಿಕೋದ್ಯಮ ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ಕೇಂದ್ರ ಸರ್ಕಾರವು ಕೆಲವು ಮಾರ್ಗಸೂಚಿಗಳನ್ನು ವಿಧಿಸಿದೆ. ಇದನ್ನೂ ಓದಿ: ಜೂ.30ರವರೆಗೆ ಲಾಕ್‍ಡೌನ್ ವಿಸ್ತರಣೆ- ಜೂನ್ 8ರಿಂದ ಮಾಲ್, ದೇವಸ್ಥಾನ ಓಪನ್

ಕೋವಿಡ್-19 ನಿಯಂತ್ರಣಕ್ಕೆ ನಿರ್ದೇಶನಗಳು:
1. ಮಾಸ್ಕ್: ಸಾರ್ವಜನಿಕ ಸ್ಥಳದಲ್ಲಿ, ಕಚೇರಿಯ ಒಳಗೆ, ಪ್ರಯಾಣದ ವೇಳೆ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು.
2. ಸಾಮಾಜಿಕ ಅಂತರ: ಒಬ್ಬೊರಿಂದ ಮತ್ತೊಬ್ಬರ ಮಧ್ಯೆ 6 ಅಡಿ ಅಂತರ ಕಾಯ್ದುಕೊಳ್ಳಬೇಕು.
3. ಸಭೆ-ಸಮಾರಂಭ: ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿ ಸಭೆ ಸಮಾರಂಭ ನಡೆಸುವಂತಿಲ್ಲ. ಮದುವೆಯಲ್ಲಿ 50ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಅತ್ಯಕ್ರಿಯೆ, ಅಂತಿಮನ ನಮನದ ವೇಳೆ 20ಕ್ಕಿಂತ ಹೆಚ್ಚು ಮಂದಿ ಭಾಗವಹಿಸುವಂತಿಲ್ಲ.
4. ದಂಡ: ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ ದಂಡ ವಿಧಿಸಲಾಗುವುದು. ಈ ಸಂಬಂಧ ರಾಜ್ಯ ಸರ್ಕಾರ, ಸ್ಥಳೀಯ ಆಡಳಿತಾಧಿಕಾರಿಗಳ ಸೂಚನೆಯಂತೆ ದಂಡ ವಿಧಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಇನ್ನೂ 1 ತಿಂಗಳು ಶಾಲಾ, ಕಾಲೇಜು ತೆರೆಯುವಂತಿಲ್ಲ

5. ನಿಷೇಧ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಕುಡಿಯುವುದು, ಪಾನ್, ಗುಟ್ಕಾ, ತಂಬಾಕು ತಿನ್ನುವುದು, ಸಿಗರೇಟ್ ಸೇದುವುದು ನಿಷೇಧ.
6. ವರ್ಕ್ ಫ್ರಂ ಹೋಮ್: ಕಂಪನಿಗಳು, ಸಂಸ್ಥೆಗಳು ಸಾಧ್ಯವಾದಷ್ಟು ವರ್ಕ್ ಫ್ರಂ ಹೋಮ್ ಅನುಸರಿಸಬೇಕು.
7. ಮುಂಜಾಗ್ರತಾ ಕ್ರಮ: ಕೆಲಸ ಅಥವಾ ವ್ಯವಹಾರದ ಸಮಯದಲ್ಲಿ ಅಧಿಕಾರಿಗಳು, ಕೆಲಸದ ಸ್ಥಳ, ಅಂಗಡಿ, ಮಾರುಕಟ್ಟೆ, ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು.
8. ಸ್ಕ್ರೀನಿಂಗ್: ಕಂಪನಿ, ವ್ಯವಹಾರದ ಸ್ಥಳಗಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಇರಲೇಬೇಕು. ಜೊತೆಗೆ ಸಿಬ್ಬಂದಿ ಒಳಗೆ ಹಾಗೂ ಹೊರಗೆ ಹೋಗುವ ಜಾಗದಲ್ಲಿ ಸ್ಯಾನಿಟೈಜರ್ ಇರಿಸಬೇಕು.
9. ಸ್ಯಾನಿಟೈಜೇಷನ್: ಕಚೇರಿಯ ಡೋರ್ ಹ್ಯಾಂಡಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಆಗಾಗ ಸ್ಯಾನಿಟೈಜೇಷನ್ ಮಾಡಬೇಕು.
10. ಕೆಲಸ ವೇಳೆ ಸಾಮಾಜಿಕ ಅಂತರ: ಕಚೇರಿಯಲ್ಲಿ ಕೆಲಸ ಮಾಡುವಾಗ ಸಿಬ್ಬಂದಿಯ ಮಧ್ಯೆ ಅಂತರ ಇರಬೇಕು. ಜೊತೆಗೆ ಶಿಫ್ಟ್ ಗಳ ಮಧ್ಯೆ ಸ್ವಚ್ಛತೆ, ಸ್ಯಾನಿಟೈಜೇಷನ್ ಮಾಡಲು ಅನುಕೂಲವಾಗುವಂತೆ ಸಮಯದ ಅಂತರವಿರಬೇಕು.

Comments

Leave a Reply

Your email address will not be published. Required fields are marked *