ಗಮನಿಸಿ, ಇಂದಿನಿಂದಲ್ಲ ನಾಳೆ ರಾತ್ರಿ 11ರಿಂದ ನೈಟ್ ಕರ್ಫ್ಯೂ

ಬೆಂಗಳೂರು: ನಾಳೆಯಿಂದ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ನೈಟ್ ಕರ್ಫ್ಯೂ ಸಮಯದಲ್ಲಿಯೂ ಬದಲಾವಣೆಯನ್ನ ಸರ್ಕಾರ ಮಾಡಿದೆ. ನಾಳೆ ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಸರ್ಕಾರ ಹೇಳಿದೆ. ಈ ಕುರಿತು ಟ್ವೀಟ್ ಮೂಲಕ ಸಿಎಂ ಕಾರ್ಯಾಲಯ ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ.

ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು.

ಇಂದು ಬೆಳಗ್ಗೆ ಸರ್ಕಾರ ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ ಎಂದು ಸರ್ಕಾರ ಹೇಳಿತ್ತು. ಸರ್ಕಾರದ ದಿಢೀರ್ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

Comments

Leave a Reply

Your email address will not be published. Required fields are marked *