ಗುದನಾಳದಲ್ಲಿ 4 ಬಂಡಲ್‍ಗಳಷ್ಟು ಗೋಲ್ಡ್ ಪೇಸ್ಟ್ – ವ್ಯಕ್ತಿ ಅರೆಸ್ಟ್

ಚೆನ್ನೈ:  ದುಬೈನಿಂದ ಚೆನ್ನೈಗೆ ಬಂದಿದ್ದ ವ್ಯಕ್ತಿಯೊಬ್ಬ ತನ್ನ ಗುದನಾಳದಲ್ಲಿ 40 ಲಕ್ಷ ರೂ. ಮೌಲ್ಯದ 810 ಗ್ರಾಂ ಚಿನ್ನವನ್ನು ಸಾಗಿಸಲು ಪ್ರಯತ್ನಿಸಿ ಏರ್​ಪೋರ್ಟ್​ನ ಕಸ್ಟಮ್ ಅಧಿಕಾರಿಗಳ ಬಳಿ ಸಿಕ್ಕಿಬಿದ್ದಿದ್ದಾನೆ.

ದುಬೈನಿಂದ ಚೆನ್ನೈಗೆ ಪ್ರಯಾಣ ಮಾಡುತ್ತಿರುವ ವ್ಯಕ್ತಿಯೊಬ್ಬ ಚಿನ್ನವನ್ನು ಸ್ಮಗ್ಲಿಂಗ್ ಮಾಡುತ್ತಿದ್ದಾನೆ ಎಂದು ಕೇಂದ್ರೀಯ ಕಂದಾಯ ತನಿಖಾ ವಿಭಾಗಕ್ಕೆ ಮಾಹಿತಿ ಬಂದಿತ್ತು. ಹಾಗಾಗಿ ಚೆನ್ನೈ ಏರ್​ಪೋರ್ಟ್​ನಲ್ಲಿ ಅಧಿಕಾರಿಗಳು ಪ್ರತಿಯೊಬ್ಬ ಪ್ರಯಾಣಿಕನನ್ನು ತಪಾಸಣೆಗೆ ಒಡ್ಡುತ್ತಿದ್ದರು. ಈ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಈತನ ಗುದನಾಳದಲ್ಲಿ ಕೊಂಡೊಯ್ಯುತ್ತಿದ್ದ 24 ಕ್ಯಾರೆಟ್ ಚಿನ್ನದ ಬೆಲೆ 40.35 ಲಕ್ಷ ಎಂದು ಏರ್​ಪೋರ್ಟ್​ ಅಧಿಕಾರಿಗಳು ಮಾಹಿತಿ ನೀಡಿದ್ದು, ಸದ್ಯ ಆತ ಬಂಧಿತನಾಗಿದ್ದಾನೆ. ಇವನ ಗುದನಾಳದಿಂದ ಒಟ್ಟು 948 ಗ್ರಾಂ.ತೂಕದ 4 ಬಂಡಲ್‍ಗಳಷ್ಟು ಗೋಲ್ಡ್ ಪೇಸ್ಟ್​ನ್ನು ಹೊರತೆಗೆಯಲಾಗಿದ್ದು, ಅದರಲ್ಲಿ 810 ಗ್ರಾಂ. 24 ಕ್ಯಾರೆಟ್ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ನೀವು ಇಲ್ಲದೇ ನನ್ನ ಬದುಕಿನಲ್ಲಿ ಖಾಲಿತನ ಉಂಟಾಗಿದೆ: ಸೋನು ಸೂದ್

ಗುದನಾಳದಲ್ಲಿ ಚಿನ್ನ ಇಟ್ಟು ಸ್ಮಗ್ಲಿಂಗ್ ಮಾಡುವ ಪ್ರಕರಣಗಳು ಇತ್ತೀಚೆಗೆ ತುಂಬ ಹೆಚ್ಚಾಗುತ್ತಿದೆ. ಡಿಸೆಂಬರ್‌ನಲ್ಲಿ ದುಬೈನಿಂದ ಬಂದ ಇಬ್ಬರು ಹೀಗೆ ಗುದನಾಳದಲ್ಲಿ ಚಿನ್ನದ ಪೇಸ್ಟ್ ತಂದಿದ್ದರು. ಅವರಿಂದ 35.5 ಲಕ್ಷ ರೂ.ಮೌಲ್ಯದ 706 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.

Comments

Leave a Reply

Your email address will not be published. Required fields are marked *