ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪೊಲೀಸರಿಗೆ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಇಬ್ಬರು ಪೊಲೀಸರು ಕೊರೊನಾದಿಂದ ಮೃತಪಟ್ಟ ನಂತರ ಎಚ್ಚೆತ್ತ ಪೊಲೀಸ್ ಇಲಾಖೆ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಿದೆ.

ನಗರ ಹೊರವಲಯದ ಜಡಲತಿಮ್ಮನಹಳ್ಳಿ ಬಳಿಯ ಸರ್ಕಾರಿ ವಸತಿ ನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಬದಲಾಯಿಸಿಲಾಗಿದೆ. ಸದ್ಯ 40 ಬೆಡ್ ಗಳ ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚುವರಿ ಬೆಡ್ ವ್ಯವಸ್ಥೆ ಮಾಡಿಕೊಳ್ಳಬಹುದಾಗಿದೆ. ಸದ್ಯ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 25 ಕ್ಕೂ ಹೆಚ್ಚು ಮಂದಿ ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ. ಪೊಲೀಸರ ಕುಟುಂಬಸ್ಥರು ಸಹ ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಬಹುದಾಗಿದೆ.

ಎಸ್‍ಪಿ ಮಿಥುನ್ ಕುಮಾರ್ ಅವರ ಕ್ರಮಕ್ಕೆ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೋಮ್ ಐಸೋಲೇಷನ್ ನಲ್ಲಿರಲು ಸಾಧ್ಯವಿಲ್ಲದವರು ಕೊರೊನಾ ಸೋಂಕಿತ ಪೊಲೀಸರ ಕುಟುಂಬಸ್ಥರು ಈ ಸೌಲಭ್ಯ ಸದುಪಯೋಗಪಡಿಸಿಕೊಳ್ಳುವಂತೆ ಎಸ್‍ಪಿ ಮಿಥುನ್ ಕುಮಾರ್ ಮನವಿ ಮಾಡಿದ್ದಾರೆ. ಈ ಕೋವಿಡ್ ಕೇರ್ ಸೆಂಟರ್ ನಲ್ಲಿ ಪ್ರತಿದಿನ ಎರಡು ಬಾರಿ ವೈದ್ಯರು ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. ದಿನದ 24 ಗಂಟೆಗಳ ಕಾಲ ಇಬ್ಬರು ದಾದಿಯರು ಸೋಂಕಿತರ ಆರೋಗ್ಯದ ಮೇಲೆ ನಿಗಾ ವಹಿಸಿಲಿದ್ದಾರೆ.

Leave a Reply