ಚುನಾವಣೆ ಗದ್ದಲದಲ್ಲಿ ಸಾಮಾಜಿಕ ಅಂತರವನ್ನೇ ಮರೆತ ಜನಪ್ರತಿನಿಧಿಗಳು, ಅಧಿಕಾರಿಗಳು

ಗದಗ: ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಆಯ್ಕೆವೇಳೆ ಶಾಸಕರು ಹಾಗೂ ತಹಶಿಲ್ದಾರರಿಂದ ಸರ್ಕಾರದ ನಿಯಮ ಉಲ್ಲಂಘನೆಯಾಗಿದ್ದು, ಸಾಮಾಜಿಕ ಅಂತರ ಮರೆತು ಬೇಕಾಬಿಟ್ಟಿಯಾಗಿ ವರ್ತಿಸಿದ್ದಾರೆ.

ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಘಟನೆ ನಡೆದಿದೆ. ಗುರುವಾರ ಲಕ್ಷ್ಮೇಶ್ವರ ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು. ಈ ವೇಳೆ ಸಾಮಾಜಿಕ ಅಂತರ, ಕೆಲವರು ಮುಖಕ್ಕೆ ಮಾಸ್ಕ್ ಧರಿಸದೆ ಲಾಕ್‍ಡೌನ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.

ಶಿರಹಟ್ಟಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿ, ತಹಶೀಲ್ದಾರ್ ಬ್ರಮರಾಂಭ ಗುಬ್ಬಿಶೆಟ್ಟಿ ಹಾಗೂ ಸಿಬ್ಬಂದಿ, ಸಾರ್ವಜನಿಕರು ಕಿಕ್ಕಿರಿದು ಸೇರಿದ್ದರು. ನೆರೆದವರೆಲ್ಲರೂ ಸಮಾಜಿಕ ಅಂತರ, ಮುಖಕ್ಕೆ ಮಾಸ್ಕ್ ಧರಿಸದೆ ಗುಂಪು ಸೇರಿದ್ದಾರೆ. ಈ ಮೂಲಕ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಆಡಳಿತ ಪಕ್ಷದ ಶಾಸಕರು, ಸರ್ಕಾರದ ಪ್ರತಿನಿಧಿ ತಹಶಿಲ್ದಾರರೇ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಕೊರೊನಾ ಅಟ್ಟಹಾಸದ ನಡುವೆ ಈ ಚುನಾವಣೆ ಅಗತ್ಯವಿತ್ತೇ, ಅಲ್ಲದೆ ಕೆಲವೇ ಜನ ಭಾಗವಹಿಸಿ ಚುನಾವಣೆ ಮಾಡಬಹುದಿತ್ತು. ಇಷ್ಟು ಜನ ಸೇರಿದರು ಸಾಮಾಜಿಕ ಅಂತರ ಕಾಪಾಡಲಾಗಿಲ್ಲ. ಮಾಸ್ಕ್ ಧರಿಸಿರಲಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ನೀಲಪ್ಪ ಹತ್ತಿ ಎಪಿಎಂಸಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸೋಮಣ್ಣ ಆಯ್ಕೆಯಾಗಿದ್ದಾರೆ.

Comments

Leave a Reply

Your email address will not be published. Required fields are marked *