ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ನೂರಾರು ಜನರನ್ನ ಕಟ್ಟಿಕೊಂಡು ಕೆರೆಯಲ್ಲಿ ಪೂಜೆ ಸಲ್ಲಿಸಿ ಲಾಕ್‍ಡೌನ್ ಉಲ್ಲಂಘಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಶ್ರೀನಿವಾಸಪುರ ತಾಲೂಕಿನ ಆಲವಾಟ್ಟ ಗ್ರಾಮದ ಕೆರೆಗೆ ಕೆ.ಸಿ.ವ್ಯಾಲಿ ನೀರು ಹರಿದ ಹಿನ್ನೆಲೆ ರಮೇಶ್ ಕುಮಾರ್ ಅವರು ತಮ್ಮದೆ ಮುಖಂಡರು, ಸ್ಥಳೀಯರನ್ನ ಸೇರಿಸಿಕೊಂಡು ಪೂಜೆಸಲ್ಲಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಪೂಜೆ ವೇಳೆ ನೂರಾರು ಜನರ ಸೇರಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದರಿಂದ ಮಾಜಿ ಸ್ಪೀಕರ್ ವಿರುದ್ಧ ಅನೇಕರು ಆಕ್ರೋಶ ಹೊರ ವ್ಯಕ್ತಪಡಿಸಿದ್ದಾರೆ. ಬಡವರಿಗೊಂದು ಶ್ರೀಮಂತರಿಗೊಂದು ನ್ಯಾಯಾನ ಎಂದು ನೆಟ್ಟಿಗರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಬಡವರ ಮದುವೆಯಲ್ಲಿ 10 ಜನರಿಗೆ ಮಾತ್ರ ಅವಕಾಶ ನೀಡುವ ಸರ್ಕಾರ ಹಾಗೂ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಈ ರೀತಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಕೆರೆ ಪೂಜೆಗೆ ನೂರಾರು ಜನರನ್ನ ಸೇರಿಸಿಕೊಂಡ ರಮೇಶ್ ಕುಮಾರ್ ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

Leave a Reply