ಜನರ ಆರೋಗ್ಯ ಕಾಳಜಿಗಾಗಿ ಉಚಿತ ಅಂಬುಲೆನ್ಸ್ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರದ ದೇಸೂರು ಗ್ರಾಮಕ್ಕೆ ಲಕ್ಷ್ಮೀ ತಾಯಿ ಫೌಂಡೇಶನ್ ಹಾಗೂ ಹರ್ಷ ಶುಗರ್ಸ್ ವತಿಯಿಂದ ಉಚಿತ ಅಂಬ್ಯುಲೆನ್ಸ್ ವಾಹನದ ಸೇವೆಯನ್ನು ಒದಗಿಸಲಾಗಿದೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಸೋಂಕಿನಿಂದಾಗಿ ಜನರು ತತ್ತರಿಸಿದ್ದಾರೆ. ಜನರ ಆರೋಗ್ಯದ ವಿಶೇಷ ಕಾಳಜಿಯಡಿ ಈ ಸೇವೆ ಒದಗಿಸಲಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಅಂದು ವಿರೋಧಿಗಳು-ಇಂದು ಸ್ನೇಹಿತರು: ಮೂವರು ಸೇರಿ ಬರ್ತ್ ಡೇ ಆಚರಣೆ

ಜನರು ಭಯಪಡದೇ ಹೆಚ್ಚಿನ ಪ್ರಮಾಣದಲ್ಲಿ ಗಂಟಲು ದ್ರವಗಳ ಮಾದರಿಯ ನೀಡಿ ಪರೀಕ್ಷಿಸಿಕೊಳ್ಳಬೇಕು. ಜೊತೆಗೆ ಕೋವಿಡ್ ಲಸಿಕೆಗಳನ್ನು (ವ್ಯಾಕ್ಸಿನೇಷನ್) ತ್ವರಿತಗತಿಯಲ್ಲಿ ಹಾಕಿಸಿಕೊಳ್ಳಬೇಕು. ಅಲ್ಲದೆ ಮಾಸ್ಕ್, ಸ್ಯಾನಿಟೈಜರ್‍ಗಳನ್ನು ಕಡ್ಡಾಯವಾಗಿ ಬಳಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಹಾಗೂ ಚಿಕ್ಕ ಮಕ್ಕಳ ಬಗ್ಗೆ ಜಾಗ್ರತೆ ಇರಲಿ ಎಂದು  ಲಕ್ಷ್ಮಿ ಹೆಬ್ಬಾಳ್ಕರ್   ಕ್ಷೇತ್ರದ ಜನರಲ್ಲಿ ವಿನಂತಿಸಿದ್ದಾರೆ.

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿ ಮುಂದುವರೆದಿದ್ದು, ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಾವಾದ 24 ಗಂಟೆಗಳ ಅವಧಿಯಲ್ಲಿ 91,702 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,403 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,92,74,823ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,63,079ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,21,671ಕ್ಕೆ ಇಳಿಕೆಯಾಗಿದೆ.

Comments

Leave a Reply

Your email address will not be published. Required fields are marked *