ಜಾತಿನಿಂದನೆ ಮಾಡಿದ್ದ ಗೋಲ್ಡನ್ ಸ್ಟಾರ್ ನಟಿ ವಿರುದ್ಧ ಕೇಸ್

ಮುಂಬೈ: ಮಳೆಯಲಿ ಜೊತೆಯಲ್ಲಿ ಸಿನಿಮಾದ ನಟಿ ಯುವಿಕಾ ಚೌಧರಿ ವಿರುದ್ಧ ಜಾತಿ ನಿಂದನೆ ಆರೋಪದ ಕೇಳಿ ಬಂದಿದೆ. ಯುವಿಕಾ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದರಿಂದ ನಟಿ ಕೋರ್ಟ್ ಮೆಟ್ಟಿಲು ಹತ್ತಬೇಕಾದ ಪರಿಸ್ಥಿತಿ ಬಂದೊದಗಿದೆ.

ಯುವಿಕಾ ಮಾತನಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಈ ವೀಡಿಯೋದಲ್ಲಿ ಯುವಿಕಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ದಲಿತ ಹಕ್ಕುಗಳ ಕಾರ್ಯಕರ್ತರೊಬ್ಬರು ಕೇಸ್ ದಾಖಲು ಮಾಡಿದ್ದರು. ಹೀಗಾಗಿ, ಯುವಿಕಾ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಯುವಿಕಾ ಮನೆಯಲ್ಲಿ ಪತಿ ಪ್ರಿನ್ಸ್ ನರುಲಾ ಅವರಿಗೆ ಹೇರ್ ಕಟ್ ಮಾಡಿಸುವಾಗ ಯುವಿಕಾ ಒಂದು ಫನ್ನಿ ವೀಡಿಯೋ ಮಾಡಿದ್ದಾರೆ. ಅದರಲ್ಲಿ ಯುವಿಕಾ ಬಳಕೆ ಮಾಡಿರುವ ಪದ ವಿವಾದಕ್ಕೀಡಾಯಿತು. ಈ ವೀಡಿಯೋ ನೋಡಿದ ನೆಟ್ಟಿಗರು ಯುವಿಕಾ ಜಾತಿ ನಿಂದನೆ ಮಾಡಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಮತ್ತೆ ಕೆಲವರು ಯುವಿಕಾ ಅವರನ್ನು ಬಂಧಿಸಿ ಎಂದು ಆಗ್ರಹಿಸಿದ್ದರು.

 

View this post on Instagram

 

A post shared by Yuvikachaudhary (@yuvikachaudhary)

ಯುವಿಕಾ ಎಸ್‍ಸಿ-ಎಸ್‍ಟಿ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಈಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎನ್ನುವ ಭರವಸೆ ನಮಗಿದೆ ಎಂದು ದಲಿತ ಹಕ್ಕುಗಳ ಕಾರ್ಯಕರ್ತ ರಜತ್ ಹೇಳಿದ್ದಾರೆ. ಮೇ 26ರಂದು ದೂರು ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಎಫ್‍ಐಆರ್ ದಾಖಲು ಮಾಡಿಕೊಂಡಿದ್ದಾರೆ. ಈ ವಿಚಾರ ವೈರಲ್ ಆಗುತ್ತಿದ್ದಂತೆ ಯುವಿಕಾ ಟ್ವಿಟರ್‍ನಲ್ಲಿ ಕ್ಷಮೆ ಕೇಳಿದ್ದಾರೆ.

 

View this post on Instagram

 

A post shared by Yuvikachaudhary (@yuvikachaudhary)

ಕ್ಷಮೆ ಯಾಚಿಸಿರುವ ಯುವಿಕಾ, ವೀಡಿಯೋದಲ್ಲಿ ಬಳಕೆ ಮಾಡಿರುವ ಪದದ ಅರ್ಥ ನನಗೆ ಗೊತ್ತಿರಲಿಲ್ಲ. ಯಾರನ್ನೂ ನೋಯಿಸುವ ಉದ್ದೇಶ ನನ್ನದಾಗಿರಲಿಲ್ಲ. ನಾನು ಯಾರನ್ನೂ ಯಾವತ್ತೂ ನೋಯಿಸುವುದಿಲ್ಲ. ದಯವಿಟ್ಟು ಕ್ಷಮಿಸಿ… ಎಲ್ಲರೂ ಅರ್ಥ ಮಾಡಿಕೊಳ್ಳುತ್ತೀರಿ ಅಂತ ಭಾವಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.


ಕ್ಷಮೆ ಕೇಳಿರುವ ನಟಿ ಯುವಿಕಾ ಅವರ ಪೋಸ್ಟ್​ಗೆ ಕಮೆಂಟ್ ಮಾಡಿರುವ ಅವರ ಪತಿ ಪ್ರಿನ್ಸ್, ತಿಳಿಯದೆ ಆದ ತಪ್ಪಿಗೆ ಕ್ಷಮೆ ಕೇಳಿದ್ದೀಯಾ. ನಿನ್ನೊಂದಿಗೆ ನಾನಿದ್ದೇನೆ ಎಂದಿದ್ದಾರೆ. ನೆಟ್ಟಿಗರು ಮಾತ್ರ ನಟಿ ಹೇಳಿಕೆಯ ಕುರಿತು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *