– ಚೀನಾ ಮೂಲದ ವ್ಯಕ್ತಿ ಗುತ್ತಿಗೆ ಪಡೆದಿದ್ದ ಕಟ್ಟಡ
– ಚೀನಾದ ವುಹಾನ್‍ನಿಂದಲೇ ವ್ಯವಹರಿಸುತ್ತಿದ್ದ ಕಟ್ಟಡ ಮಾಲೀಕ
ಬೆಂಗಳೂರು: ಚೀನಾದ ವುಹಾನ್ ನಿಂದಲೇ ಮಧ್ಯವರ್ತಿಗಳ ಮೂಲಕ ವ್ಯವಹರಿಸಿ, ಜಿಎಸ್‍ಟಿ ವಂಚಿಸಿ, ಅಪಾರ ಪ್ರಮಾಣದ ಚೀನಾ ನಿರ್ಮಿತ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಪ್ರಕರಣ ಬೆಳಕಿಗೆ ಬಂದಿದೆ.
ಜಿಎಸ್‍ಟಿ ವಂಚಿಸಿ ಚೀನಾ ನಿರ್ಮಿತ ಎಲೆಕ್ಟ್ರಾನಿಕ್ಸ್ ಉಪಕರಣಗಳ ಅಕ್ರಮ ಸಂಗ್ರಹಣೆ ಮಾಡಲಾಗಿದ್ದು, ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯ ಕಟ್ಟಡದಲ್ಲಿ ಸಂಗ್ರಹಿಸಿಡಲಾಗಿದ್ದ ಎಲೆಕ್ಟ್ರಾನಿಕ್ಸ್ ಉಪಕರಣಗಳ ಗೋಡೌನ್ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟ ಸುಮಾರು 4 ಕೋಟಿ ರೂ. ವಸ್ತುಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ದಕ್ಷಿಣ ವಲಯದ ಜಂಟಿ ಆಯುಕ್ತ ನಿತೀಶ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಈ ವೇಳೆ ಚೀನಾ ಮೂಲದ ವ್ಯಕ್ತಿ ಖಾಸಗಿ ಕಟ್ಟಡವನ್ನು ಗುತ್ತಿಗೆಗೆ ಪಡೆದಿದ್ದು, ಚೀನಾದ ವುಹಾನ್‍ನಿಂದಲೇ ಮಧ್ಯವರ್ತಿಗಳ ಮೂಲಕ ವ್ಯವಹರಿಸುತ್ತಿದ್ದ ಎಂದು ತಿಳಿಸಿದೆ. ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

Leave a Reply