ಜ್ವರ, ಶೀತ, ಮೈಕೈ ನೋವನ್ನು ಅಸಡ್ಡೆ ಮಾಡ್ಬೇಡಿ: ಉಡುಪಿ ಡಿಸಿ

– ಜಿಲ್ಲೆಯ ಪರಿಸ್ಥಿತಿ ಕೈಮೀರುತ್ತಿದೆ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪರಿಸ್ಥಿತಿ ಕೈಮೀರುತ್ತಿದೆ. ಸೋಂಕಿನ ಲಕ್ಷಣ ಕಂಡುಬಂದ ಕೂಡಲೇ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಉಡುಪಿ ಡಿಸಿಸಿ ಜಗದೀಶ್ ಮನವಿ ಮಾಡಿದ್ದಾರೆ.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಐಸಿಯು ಭರ್ತಿಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ತುರ್ತು ಮನವಿಯೊಂದನ್ನು ಮಾಡಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಪರಿಸ್ಥಿತಿ ಕೈಮೀರುವ ಹಂತದಲ್ಲಿದೆ. ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಸೋಂಕಿನ ಲಕ್ಷಣ ಇರುವವರು ನಿರ್ಲಕ್ಷ್ಯ ಮಾಡಬಾರದು. ಲಕ್ಷಣ ಇದ್ದರೂ ಹತ್ತು ಹದಿನೈದು ದಿನ ಮನೆಯಲ್ಲೇ ಇರುವುದು ಸರಿಯಲ್ಲ ಎಂದಿದ್ದಾರೆ.

ಕೊರೊನಾ ಉಲ್ಬಣಿಸಿದ ಬಳಿಕ ನೇರ ಐಸಿಯೂಗೆ ಬರುವವರ ಸಂಖ್ಯೆ ಹೆಚ್ಚುತ್ತಲೆ ಇದೆ, ಹೀಗೆ ಮಾಡಬೇಡಿ. ತಕ್ಷಣ ಬಂದು ಟೆಸ್ಟ್ ಮಾಡಿಸಿ. ಸರಳ ಚಿಕಿತ್ಸೆ ಮಾಡದೆ ಆರೋಗ್ಯ ಸ್ಥಿತಿ ಗಂಭೀರವಾದ ಮೇಲೆ ಆಸ್ಪತ್ರೆಗೆ ಬರುವುದು ಬಹಳ ಅಪಾಯಕಾರಿ. ವೈದ್ಯರಿಗೂ ಜೀವರಕ್ಷಣೆ ಮಾಡುವ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಕರು ಮತ್ತು ಬಂಧುಗಳೇ ಮನೆಗೆ ಬಂದರೂ ಸಾಮಾಜಿಕ ಅಂತರ ಪಾಲಿಸಬೇಕು. ಈ ಸಮಯದಲ್ಲಿ ಸಂಬಂಧಿಕರು ಮನೆಯಲ್ಲಿದ್ದರೂ ಐಸೊಲೇಷನ್‍ನಲ್ಲಿರಲಿ. ಮನೆಯ ಒಬ್ಬರಿಗೆ ಬಂದರೆ ಎಲ್ಲರಿಗೂ ಸೋಂಕು ಹರಡುತ್ತದೆ. ಇದರಿಂದ ಸಮಸ್ಯೆ ಬಿಗಡಾಯಿಸುತ್ತದೆ. ಜ್ವರ, ಶೀತ ಮೈಕೈ ನೋವು ಕಫ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕ ಮಾಡಿ ಎಂದಿದ್ದಾರೆ.

Comments

Leave a Reply

Your email address will not be published. Required fields are marked *