ಟಿಕೆಟ್ ಸಿಗದಿದ್ರೆ ಬಿಜೆಪಿ ಪರ ಪ್ರಚಾರ: ಪ್ರಮೋದ್ ಮುತಾಲಿಕ್

– ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಇಲ್ಲ

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿ. ಬೈ ಎಲೆಕ್ಷನ್ ನಲ್ಲಿ ಟಿಕೆಟ್ ಸಿಗದಿದ್ರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ. ಬೆಳಗಾವಿ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಸಿಗುತ್ತೋ ಅವರ ಪರವಾಗಿ ನಾನು ಪ್ರಚಾರಕ್ಕೆ ಹೋಗುತ್ತೇನೆ. ನನಗೆ ದೇಶ ಮುಖ್ಯ ಹೀಗಾಗಿ ಬಿಜೆಪಿ ಪರ ಪ್ರಚಾರ ಮಾಡುವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪ್ರಮೋದ್ ಮುತಾಲಿಕ್, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಈಗಾಗಲೇ ಹಲವರು ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದಾರೆ. ಚುನಾವಣೆ ಘೋಷಣೆಯಾಗಿ ಮೂರು ದಿನ ಕಳೆದ್ರು ಬಿಜೆಪಿ ಅಭ್ಯರ್ಥಿ ಹೆಸರನ್ನ ಇನ್ನೂ ಘೋಷಣೆ ಮಾಡಿಲ್ಲ. ಆದ್ರೆ ನಾನು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಆಕ್ಷಾಂಕಿಯಾಗಿರುವೆ. ನನಗೆ ಟಿಕೆಟ್ ಸಿಗುವ ಭರವಸೆ ಇದೆ ಎಂದರು.

ಟಿಕೆಟ್ ವಿಚಾರವಾಗಿ ಬಿಜೆಪಿಯ ಎಲ್ಲಾ ಪ್ರಮುಖರನ್ನ ಭೇಟಿ ಮಾಡಿದ್ದೇನೆ. ಎಲ್ಲರೂ ಸಹ ಕೋರ್ ಕಮಿಟಿ ಯಲ್ಲಿ ಚರ್ಚಿಸುವುದಾಗಿ ಹೇಳಿದ್ದಾರೆ. ಶೇಕಡ 90ರಷ್ಟು ನನಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಟಿಕೆಟ್ ವಿಚಾರವಾಗಿ ರಾಜಕೀಯ ಬೆಳವಣಿಗೆ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *