ಟೆಂಪೋ ಟ್ರಾವೆಲರ್, ಟಿಪ್ಪರ್ ನಡುವೆ ಡಿಕ್ಕಿ- ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಧಾರವಾಡ: ಟೆಂಪೋ ಟ್ರಾವೆಲರ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲಿಯೇ 10 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಇಟಿಗಟ್ಡಿ ಗ್ರಾಮದ ಬೈಪಾಸ್ ನಲ್ಲಿ ನಡೆದಿದೆ.

ಮೃತ ದುರ್ದೈವಿಗಳನ್ನು ವೀಣಾ, ರಾಜೇಶ್ವರಿ, ಮಂಜುಳಾ ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಗಾಯಗೊಂಡಿರುವ 5 ಜನ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಗೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನಡೆಯುತ್ತಿದೆ, ಆದರೆ ಸಾವಿನ ಸಂಖ್ಯೆ ಏರುತ್ತಲೇ ಇದೆ.

ದಾವಣಗೆರೆಯಿಂದ ಪಣಜಿಗೆ ಹೋಗುತಿದ್ದ ಟೆಂಪೋ ಟ್ರಾವೆಲರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿದೆ. ಎರಡು ವಾಹನಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟಿರುವವರೆಲ್ಲಾ ದಾವಣಗೆರೆ ಮೂಲದವರಾಗಿದ್ದಾರೆ. ಲೇಡಿಸ್ ಕ್ಲಬ್ ಸದಸ್ಯರಾದ ಇವರು ಟೆಂಪೋ ಟ್ರಾವೆಲರ್ ನಲ್ಲಿ ಗೋವಾಕ್ಕೆ ಹೋಗುತ್ತಿದ್ದರು ಈ ವೇಳೆ ಅಪಘಾತ ಸಂಭವಿಸಿದೆ.

ಅಪಘಾತ ಸ್ಥಳಕ್ಕೆ ಎಸಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಾಹನದಲ್ಲಿ ಇನ್ನು ಹಲವು ಶವಗಳು ಸಿಲುಕಿಕೊಂಡಿವೆ ಅವುಗಳನ್ನು ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Comments

Leave a Reply

Your email address will not be published. Required fields are marked *