ಡಿಸಿಎಂ ಅಶ್ವಥ್ ನಾರಾಯಣ್‍ಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಸಿ.ಅಶ್ವಥ್ ನಾರಾಯಣ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡುವ ಮೂಲಕ ಸ್ವತಃ ಅವರೇ ಸ್ಪಷ್ಟಪಡಿಸಿದ್ದು, ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

ಸೆಪ್ಟೆಂಬರ್ 21ರಿಂದ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಧಿವೇಶನದಲ್ಲಿ ಭಾಗವಹಿಸುವ ಎಲ್ಲ ಶಾಸಕರು ಹಾಗೂ ಅಧಿಕಾರಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಈ ಹಿನ್ನೆಲೆ ಹಲವರು ಕೊರೊನಾ ಪರೀಕ್ಷೆಗೆ ಒಳಗಾಗುತ್ತಿದ್ದಾರೆ. ಅದರಂತೆ ಡಿಸಿಎಂ ಅಶ್ವಥ್ ನಾರಾಯಣ್ ಸಹ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಈ ವೇಳೆ ಪಾಸಿಟಿವ್ ಇರುವುದು ಪತ್ತೆಯಾಗಿದೆ.

Comments

Leave a Reply

Your email address will not be published. Required fields are marked *