ಧಾರವಾಡ: ತಮ್ಮ ವಿಜಯ್ ಕುಲಕರ್ಣಿಯಂತೆ ಅಣ್ಣ ವಿನಯ್ ಕುಲಕರ್ಣಿಯನ್ನು ಕೂಡ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ.
ನವೆಂಬರ್ 7ರಂದು ವಿನಯ್ ಕುಲಕರ್ಣಿ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದರು. ಆದರೆ ಜನ್ಮದಿನಕ್ಕೂ ಮುಂಚೆಯೇ ವಿನಯ್ ಕುಲಕರ್ಣಿ ವಿಚಾರಣೆ ನಡೆಸಲಾಗುತ್ತಿದೆ. ಈ ಮೂಲಕ ತಮ್ಮನಂತೆ ಅಣ್ಣನಿಗೂ ಜನ್ಮದಿನ ಮುಂಚೆಯೇ ಸಿಬಿಐ ಅಧಿಕಾರಿಗಳು ಡ್ರಿಲ್ ಮಾಡಲಿದ್ದಾರೆ.

ಈ ಹಿಂದೆ ಸೋದರ ವಿಜಯ್ ಕುಲಕರ್ಣಿಗೂ ಜನ್ಮದಿನ ಮುಂಚೆಯೇ ಬೆಂಗಳೂರಿನಲ್ಲಿ ವಿಚಾರಣೆ ನಡೆದಿತ್ತು. ಜನ್ಮದಿನದಂದು ಕೂಡ ಧಾರವಾಡದಲ್ಲಿ ಸಿಬಿಐ, ವಿಜಯ್ ವಿಚಾರಣೆ ನಡೆಸಿತ್ತು. ಈಗ ವಿನಯ್ ಜನ್ಮದಿನಕ್ಕೆ ಎರಡು ದಿನ ಇರುವಾಗಲೇ ಸಿಬಿಐ ವಶಕ್ಕೆ ಪಡೆದಿದೆ.
2017 ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.

ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳು ಯೋಗಿಶ್ ಗೌಡನ ಸಹೋದರನ ಜೊತೆ ರಾಜಿ ಮಾಡಿಕೊಳ್ಳಲು ಮುಂದಾಗಿದ್ದರು. ಇತ್ತ ವಿನಯ್ ಕುಲಕರ್ಣಿಯವರ ಹೆಸರನ್ನು ಕೈ ಬಿಡಲು ಅಧಿಕಾರಿಗಳು ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ ಗೌಡ ತಾಯಿ ಆರೋಪಿಸಿದ್ದರುನಿದೀಗ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇಂದು ಬೆಳ್ಳಂಬೆಳಗ್ಗೆ ವಿನಯ್ ಮನೆಗೆ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ಮಾಜಿ ಸಚಿವರನ್ನು ವಶಕ್ಕೆ ಪಡೆದಿದ್ದಾರೆ.


Leave a Reply