ತಮ್ಮ ಅಧಿಕೃತ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದ ಸುಧಾಕರ್

ಬೆಂಗಳೂರು: ದೇಶಾದ್ಯಂತ ಇಂದು 74ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿ ಬಾರಿಯೂ ಅತ್ಯಂತ ಸಡಗರ, ಸಂಭ್ರಮದಿಂದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಸಡಗರಕ್ಕೆ ಕೋವಿಡ್ 19 ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಸಚಿವ ಸುಧಾಕರ್ ಅವರು ತಮ್ಮ ಮನೆಯಲ್ಲಿಯೇ ಧ್ವಜಾರೋಹಣವನ್ನು ನೆರವೇರಿಸಿದ್ದಾರೆ.

ಈ ಸಂಬಂಧ ಮನೆಯ ಫೋಟೋದೊಂದಿಗೆ ಟ್ವೀಟ್ ಮಾಡಿರುವ ಸಚಿವರು, 74ನೇ ಸ್ವಾತಂತ್ಯ ದಿನಾಚರಣೆ ಅಂಗವಾಗಿ ನನ್ನ ಆಧಿಕೃತ ನಿವಾಸದಲ್ಲಿ ಧ್ವಜಾರೋಹಣವನ್ನು ನೆರವೇರಿಸಲಾಯಿತು ಎಂದು ಬರೆದುಕೊಂಡಿದ್ದಾರೆ.

ಇದಕ್ಕೂ ಮೊದಲು ಟ್ವೀಟ್ ಮಾಡಿರುವ ಸುಧಾಕರ್, ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದ್ದಾರೆ. ನಾಡಿನ ಸಮಸ್ತ ಜನತೆಗೆ 74ನೇ ಸ್ವಾತಂತ್ರ್ಯ ದಿನದ ಶುಭಾಶಯಗಳು. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನು ಮುಡಿಪಾಗಿಟ್ಟ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಿ ಗೌರವ ಸಲ್ಲಿಸೋಣ. ಅವರ ಆದರ್ಶಗಳನ್ನು ಪಾಲಿಸೋಣ ಎಂದು ಕರೆ ನೀಡಿದರು.

Comments

Leave a Reply

Your email address will not be published. Required fields are marked *