ತಾಯಿಯಾದ ಸಂತಸದಲ್ಲಿ ಬಿಗ್‍ಬಾಸ್ ಸ್ಪರ್ಧಿ ನೇಹಾ ಗೌಡ

ವಾಷಿಂಗ್ಟನ್: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 3’ರ ಸ್ಪರ್ಧಿ ನೇಹಾ ಗೌಡ ತಾಯಿಯಾದ ಸಂತಸದಲ್ಲಿದ್ದು, ಇತ್ತೀಚೆಗಷ್ಟೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ತಾವು ತಾಯಿಯಾಗಿರುವ ವಿಚಾರವನ್ನ ನೇಹಗೌಡ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಕುವ ಮೂಲಕ ಶೇರ್ ಮಾಡಿಕೊಂಡಿದ್ದಾರೆ. ನೇಹಾ ಗೌಡ ಪತಿಯೊಂದಿಗೆ ಅಮೆರಿಕಾದ ನಾರ್ತ್ ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿದ್ದಾರೆ. ಪತಿ ಸೇರಿದಂತೆ ಕುಟುಂಬದವರು ತಮ್ಮ ಮನೆಗೆ ಹೊಸ ಸದಸ್ಯೆಯನ್ನು ಬರಮಾಡಿಕೊಂಡಿದ್ದಾರೆ.

ನೇಹಾ ಗೌಡ ಸೀಮಂತ ಕಾರ್ಯಕ್ರಮ ಸರಳವಾಗಿ ನಡೆದಿದ್ದು, ಆಪ್ತರು, ಸ್ನೇಹಿತರು ಮಾತ್ರ ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ನೇಹಾ ತಮಗೆ ಹೆಣ್ಣು ಮಗು ಹುಟ್ಟಬೇಕೆಂಬ ಆಸೆಯಿದೆ ಅಂತ ಹೇಳಿಕೊಂಡಿದ್ದರು. ಅದರಂತೆಯೇ ಅವರಿಗೆ ಹೆಣ್ಣು ಮಗು ಹುಟ್ಟಿದೆ.

ನೇಹಾ ಗೌಡ ವೃತ್ತಿಯಲ್ಲಿ ಗಗನಸಖಿಯಾಗಿದ್ದು, ಕನ್ನಡದಲ್ಲಿ ಕೆಲ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅಲ್ಲದೇ ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 3’ರಲ್ಲಿ ಭಾಗವಹಿಸಿದ್ದರು. ಬಿಗ್‍ಬಾಸ್ ಮನೆಯಲ್ಲಿ ಉತ್ತಮವಾಗಿ ಆಟವಾಡಿದ್ದರು. ಆದರೆ ಬಿಗ್‍ಬಾಸ್ ಮನೆಯಿಂದ 5ನೇ ಸ್ಪರ್ಧಿ ಆಗಿ ನೇಹಾ ಗೌಡ ಹೊರ ಬಂದಿದ್ದರು. ಜೊತೆಗೆ ‘ಡಾನ್ಸಿಂಗ್ ಸ್ಟಾರ್’ ರಿಯಾಲಿಟಿ ಶೋದಲ್ಲಿಯೂ ನೇಹಾ ಭಾಗವಹಿಸಿದ್ದರು.

Comments

Leave a Reply

Your email address will not be published. Required fields are marked *