ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ಲಸಿಕೆ ಅಭಿಯಾನ ಸ್ಥಗಿತ

ಜೋಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾವು ತನ್ನ ಆರೋಗ್ಯ ಕಾರ್ಯಕರ್ತರಿಗೆ ಅಸ್ಟ್ರಾಜೆನೆಕಾ  ಲಸಿಕೆ ನೀಡುತ್ತಿದ್ದ ಅಭಿಯಾನವನ್ನು ಸ್ಥಗಿತಗೊಳಿಸಿದೆ.

ದಕ್ಷಿಣ ಆಫ್ರಿಕಾ ಕಳೆದ ವಾರ ಹತ್ತು ಲಕ್ಷ ಡೋಸ್ ಅಸ್ಟ್ರಾಜೆನೆಕಾ ಲಸಿಕೆಗಳನ್ನು ಪಡೆದುಕೊಂಡಿದ್ದು, ಫೆಬ್ರುವರಿ ತಿಂಗಳ ಮಧ್ಯದಿಂದ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲು ಉದ್ದೇಶಿಸಿತ್ತು. ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್‍ನ ಪ್ರಕರಣಗಳು ಹೆಚ್ಚಾಗಿದ್ದು, ಅಸ್ಟ್ರಾಜೆನೆಕಾ ಲಸಿಕೆಯು ಇದರಿಂದ ಸ್ವಲ್ಪ ಮಟ್ಟದ ಸುರಕ್ಷತೆಯನ್ನು ಮಾತ್ರ ನೀಡುತ್ತದೆ ಎಂದು ದಕ್ಷಿಣ ಆಫ್ರಿಕಾ ನಡೆಸಿದ ಪ್ರಾಥಮಿಕ ಅಧ್ಯಯನದಲ್ಲಿ ತಿಳಿದುಬಂದಿದೆ.

ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರಗೊಂಡ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಕೋವಿಡ್ ಪ್ರಕರಣಗಳ ಪೈಕಿ ಶೇಕಡ 90 ರಷ್ಟು ರೂಪಾಂತರಗೊಂಡ ಕೊರೊನಾ ಸೋಂಕು ಹೆಚ್ಚಾಗಿವೆ ಎಂದು ಅಲ್ಲಿನ ಆರೋಗ್ಯ ಸಚಿವ ಜ್ವೆಲಿ ಮ್ಮೈಜ್ ಅವರು ತಿಳಿಸಿದ್ದಾರೆ. ಅಸ್ಟ್ರಾಜೆನೆಕಾ ಲಸಿಕೆಯು ಕೇವಲ ಮೂಲ ಕೊರೊನಾ ವೈರಸ್‍ನ ವಿರುದ್ಧ ಪರಿಣಾಮಕಾರಿಯಾಗಿದೆ. ಇದು ರೂಪಾಂತರಗೊಂಡ ಕೊರೊನಾದ ಮೇಲೆ ಅಷ್ಟೊಂದು ಪರಿಣಾಮಕಾರಿಯಾಗಿಲ್ಲ. ಹಾಗಾಗಿ ಸದ್ಯಕ್ಕೆ ಲಸಿಕೆ ಅಭಿಯಾನವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮ್ಮೈಜ್ ಹೇಳಿದರು.


ಕ್ಲಿನಿಕಲ್ ಟ್ರಯಲ್‍ಗೆ 2,000 ಮಂದಿಯನ್ನು ಒಳಪಡಿಸಲಾಗಿತ್ತು. ಇದರಲ್ಲಿ ಭಾಗಿಯಾದವರಲ್ಲಿ ಹೆಚ್ಚಿನವರು ಯುವಕರು ಮತ್ತು ಆರೋಗ್ಯವಂತರಾಗಿದ್ದರು. ಇದರಲ್ಲಿ ಭಾಗಿಯಾಗಿದ್ದ ಸ್ವಯಂಸೇವಕರ ಸರಾಸರಿ ವಯಸ್ಸು 31 ಆಗಿದೆ. ದಕ್ಷಿಣ ಆಫ್ರಿಕಾವು ನಡೆಸಿದ ಕ್ಲಿನಿಕಲ್ ಪ್ರಯೋಗದಲ್ಲಿ ಅಸ್ಟ್ರಾಜೆನೆಕಾ ಲಸಿಕೆಯು ಲಘು ಮತ್ತು ಪ್ರಬಲ ರೋಗಗಳ ವಿರುದ್ಧ ಪರಿಣಾಮಕಾರಿಯಾಗಿಲ್ಲ ಎಂಬುದು ತಿಳಿದುಬಂದಿದೆ. ವಿಜ್ಞಾನಿಗಳು ಈ ಬಗ್ಗೆ ಅಧ್ಯಯನವನ್ನು ನಡೆಸುತ್ತಿದ್ದಾರೆ. ಈ ಬಳಿಕ ಸರ್ಕಾರ ಲಸಿಕೆ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗುತ್ತಿದೆ.

Comments

Leave a Reply

Your email address will not be published. Required fields are marked *