ದಕ್ಷಿಣ ಕನ್ನಡದಲ್ಲಿ ಜೂನ್ 20ರವರೆಗೆ ಲಾಕ್‍ಡೌನ್ ಮುಂದುವರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 14ರ ಬಳಿಕ ಮತ್ತೊಂದು ವಾರ ಲಾಕ್‍ಡೌನ್ ಮುಂದುವರಿಸಲು ಅವಕಾಶ ನೀಡುವಂತೆ ಸಿಎಂ ಜೊತೆಗಿನ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮನವಿ ಮಾಡಿದರು.

ಕಂಟೈನ್ಮೆಂಟ್ ಝೋನ್ ನಲ್ಲಿ ಸಂಪೂರ್ಣ ಲಾಕ್‍ಡೌನ್ ಬಗ್ಗೆಯೂ ಚರ್ಚಿಸುವುದಾಗಿ ತಿಳಿಸಿರುವ ಜಿಲ್ಲಾಡಳಿತ, ಕೆಲ ಸಡಿಲಿಕೆ ಮಾಡಿ ದ.ಕ ಜಿಲ್ಲೆ ಲಾಕ್‍ಡೌನ್‍ಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಸಿಎಂ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ನಾಳೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಸೇರಿ ಲಾಕ್‍ಡೌನ್ ರೂಪುರೇಷೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿದೆ.

ಜಿಲ್ಲೆಯಲ್ಲಿ ಇನ್ನೂ ಶೇ.15ರಷ್ಟು ಪಾಸಿವಿಟಿ ದರ ಇರುವುದರಿಂದ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳುವುದು. ಅಲ್ಲದೆ ತಾಲೂಕುಗಳ ನಡುವಿನ ಓಡಾಟಕ್ಕೆ ನಿರ್ಬಂಧ ವಿಧಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಅಭಿಪ್ರಾಯ ಮಂಡಿಸಿದರು. ಮಂಗಳೂರು, ಬಂಟ್ವಾಳ ತಾಲೂಕು ಹೊರತುಪಡಿಸಿದರೆ ಉಳಿದಂತೆ ಸುಳ್ಯ, ಬೆಳ್ತಂಗಡಿ, ಪುತ್ತೂರು ತಾಲೂಕುಗಳಲ್ಲಿ ಕೊರೊನಾ ಹೆಚ್ಚಾಗಿದೆ. ಆದ್ದರಿಂದ ವಾಹನ ಸಂಚಾರಕ್ಕೂ ನಿರ್ಬಂಧ ವಿಧಿಸುವ ಬಗ್ಗೆ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *