ದಾವಣಗೆರೆ: ಬೆಣ್ಣೆ ನಗರಿಯಲ್ಲಿ ಕೊರೊನಾ ಸೋಂಕು ಹಳ್ಳಿಗಳಿಗೆ ಹೆಚ್ಚು ಹಬ್ಬುತ್ತಿದ್ದು, ಒಂದೇ ಗ್ರಾಮದಲ್ಲಿ ಒಂದೇ ದಿನಕ್ಕೆ 28 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.

ತಾಲೂಕಿನ ಜರೀಕಟ್ಟೆ ಗ್ರಾಮದಲ್ಲಿ ಸೋಂಕು ಹೆಚ್ಚಾಗಿದ್ದು, ಕಳೆದ ಒಂದೇ ದಿನದಲ್ಲಿ 28 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಗ್ಯ ಇಲಾಖೆ 94 ಜನರ ಗಂಟಲು ದ್ರವ ಸಂಗ್ರಹಿಸಿತ್ತು. 94 ಜನರ ಪೈಕಿ 28 ಜನರಿಗೆ ಸೋಂಕು ಇರಿವುದು ದೃಢವಾಗಿದೆ. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಇಲಾಖೆಯಿಂದ ಕೋವಿಡ್ ಪರೀಕ್ಷೆ ಮುಂದುವರೆದಿದೆ. ಇದನ್ನೂ ಓದಿ: ಕೊರೊನಾ ಪರೀಕ್ಷೆಗೆ ಬಂದ ವೈದ್ಯಕೀಯ ತಂಡದ ಮೇಲೆ ಗ್ರಾಮಸ್ಥರಿಂದ ಹಲ್ಲೆಗೆ ಯತ್ನ

ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರಿಂದ ಜರೇಕಟ್ಟೆ ಗ್ರಾಮದಲ್ಲಿ ಪೊಲೀಸರಿಂದ ಕೊರೊನಾ ಜಾಗೃತಿ ಮೂಡಿಸಲಾಯಿತು. ಗ್ರಾಮಾಂತರ ಪೊಲೀಸರು ತೆರೆದ ವಾಹನದಲ್ಲಿ ಜನರಿಗೆ ಜಾಗೃತಿ ಮೂಡಿಸಿದರು. ಮಾಸ್ಕ್ ಹಾಗೂ ಸ್ಯಾನಿಟೇಜರ್ ವಿತರಣೆ ಮಾಡಿದರು. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಹ ಹಳ್ಳಿಗಳ ಮೇಲೆ ತೀವ್ರ ನಿಗಾ ಇಟ್ಟು ಕೆಲಸ ಮಾಡುತ್ತಿದೆ. ಆದರೂ ಪ್ರಕರಣಗಳು ಹೆಚ್ಚುತ್ತಲೇ ಇವೆ.

Leave a Reply