ದೇವರ ಮನೆಯಲ್ಲಿ ನಟಸಾರ್ವಭೌಮ ನಟಿಗೆ ಪೂಜೆ – ಫೋಟೋ ವೈರಲ್

ಬೆಂಗಳೂರು: ಸಾಮಾನ್ಯವಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗೆ ಹಾಲಿನ ಅಭಿಷೇಕ, ಹೂವಿನ ಹಾರ ಹಾಕುವುದು, ಟ್ಯಾಟೂ ಹಾಕಿಸಿಕೊಳ್ಳುವುದು ಹೀಗೆ ಹಲವಾರು ರೀತಿಯಲ್ಲಿ ಪ್ರೀತಿಯನ್ನು ವ್ಯಕ್ತಪಡಿಸುವುದನ್ನು ನೋಡಿದ್ದೇವೆ. ಆದರೆ ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟಿಯೊಬ್ಬರ ಫೋಟೋವನ್ನು ದೇವರ ಮನೆಯಲ್ಲಿ ಇಟ್ಟುಕೊಂಡು ಪೂಜೆ ಮಾಡಿದ್ದಾರೆ. ಸದ್ಯ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೌದು, ಮಲಯಾಳಂನ ಪ್ರೇಮಂ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಅನುಪಮಾ ಪರಮೇಶ್ವರನ್, ಮೊದಲ ಸಿನಿಮಾದಲ್ಲಿಯೇ ತಮ್ಮ ಚೆಲುವಿನ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಕೇರಳದಲ್ಲಿ ಅಪಾರ ಅಭಿಮಾನಿ ಬಳಗ ಹೊಂದಿರುವ ಅನುಪಮಾ ಪರಮೇಶ್ವರನ್ ಅಭಿಮಾನಿಯೊಬ್ಬರು ದೇವರ ಮನೆಯಲ್ಲಿ ಅನುಪಮಾ ಅವರ ಫೋಟೋ ಇಟ್ಟುಕೊಂಡು ಪೂಜಿಸುವ ಮೂಲಕ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ಸದ್ಯ ಈ ಫೋಟೋವನ್ನು ಅಭಿಮಾನಿ ಟ್ವಿಟ್ಟರ್‌ನಲ್ಲಿ ಶೇರ್ ಮಾಡುವುದರ ಜೊತೆಗೆ ಅನುಪಮಾ  ಪರಮೇಶ್ವರ್ ಅವರ  ದೊಡ್ಡ ಅಭಿಮಾನಿ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇನ್ನೂ ಈ ಫೋಟೋಗೆ ನಟಿ ಅನುಪಮಾ ಕೂಡ ಲೈಕ್ ನೀಡಿದ್ದಾರೆ.

ಮಲೆಯಾಳಂ, ತಮಿಳು ಹಾಗೂ ತೆಲುಗಿನ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿರುವ ಅನುಪಮಾ, ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ ಜೋಡಿಯಾಗಿ ನಟಸಾರ್ವಭೌಮ ಸಿನಿಮಾದಲ್ಲಿ ನಟಿಸಿದ್ದರು. ಇದನ್ನೂ ಓದಿ: ಜನ ಬಯಸಿದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ: ಅಭಿಷೇಕ್ ಅಂಬರೀಶ್

Comments

Leave a Reply

Your email address will not be published. Required fields are marked *