ದೇಶದಲ್ಲಿ ಮುಂದುವರಿದ ಕೊರೊನಾ ಸ್ಫೋಟ- ಒಂದೇ ದಿನ 1,007 ಮಂದಿ ಸಾವು

– 15 ಲಕ್ಷಕ್ಕೂ ಅಧಿಕ ಮಂದಿ ಗುಣಮುಖ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಮಹಾಸ್ಫೋಟಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,007 ಮಂದಿ ಕೋವಿಡ್ 19ಗೆ ಬಲಿಯಾಗಿದ್ದಾರೆ.

ನಿನ್ನೆ ಒಂದೇ ದಿನ 62,064 ಮಂದಿಯಲ್ಲಿ ಕೊರೊನಾ ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 22,15,075ಕ್ಕೆ ಏರಿಕೆಯಾಗಿದೆ. ಈ ಪೈಕಿ 6,34,945 ಸಕ್ರಿಯ ಪ್ರಕರಣಗಳಿದ್ದು, 15,35,744 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಇದುವರೆಗೂ ದೇಶದಲ್ಲಿ 44,386 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ನಿನ್ನೆ ಒಂದೇ ದಿನ ದೇಶದಲ್ಲಿ 4,77,023 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 2,45,83,558 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.

10 ರಾಜ್ಯಗಳಲ್ಲಿ ಶೇ.80ರಷ್ಟು ಕೇಸುಗಳು ಪತ್ತೆ:
ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ್, ಒಡಿಶಾ, ದೆಹಲಿ ಹಾಗೂ ತೆಲಂಗಾಣದಲ್ಲಿ ಅತೀ ಹೆಚ್ಚು ಸೋಂಕು ಕಾಣಿಸಿಕೊಳ್ಳುವ ರಾಜ್ಯಗಳಾಗಿವೆ. ಅದರಲ್ಲೂ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕದಲ್ಲಿ ದಿನನಿತ್ಯ ಶೇ.50 ರಷ್ಟು ಸೋಂಕಿತರು ಪತ್ತೆಯಾಗುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Comments

Leave a Reply

Your email address will not be published. Required fields are marked *