ಧರ್ಮಸ್ಥಳದ ಪೂಜ್ಯ ಖಾವಂದರಿಗೆ ಹುಟ್ಟುಹಬ್ಬದ ಸಂಭ್ರಮ- ಸಿಎಂ ವಿಶ್

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಇಂದು 72ನೇ ವರ್ಷದ ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಗಣ್ಯರು ಪೂಜ್ಯ ಖಾವಂದರಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ. ಅಂತೆಯೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೂಡ ಧರ್ಮಾಧಿಕಾರಿಗೆ ಶುಭಾಶಯ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದಂದು ಅವರಿಗೆ ಭಕ್ತಿಪೂರ್ವಕ ಶುಭಕಾಮನೆಗಳು. ಶ್ರೀ ಮಂಜುನಾಥ ಸ್ವಾಮಿಯು ತಮಗೆ ಉತ್ತಮ ಆರೋಗ್ಯವನ್ನು, ಶಿಕ್ಷಣ, ಸ್ತ್ರೀಶಕ್ತಿ, ಗ್ರಾಮೀಣಾಭಿವೃದ್ಧಿ ಮೊದಲಾದ ಹಲವಾರು ಕ್ಷೇತ್ರಗಳಲ್ಲಿ ನಿಮ್ಮ ಸೇವಾಕೈಂಕರ್ಯ ಇನ್ನೂ ದೀರ್ಘಕಾಲ ಯಶಸ್ವಿಯಾಗಿ ಮುಂದುವರಿಯುವಂತೆ ಹರಸಲಿ ಎಂದು ಬರೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳವು ಭಕ್ತಿಗೆ ಹಾಗೂ ಅನ್ನಪ್ರಸಾದಕ್ಕೆ ಇಡೀ ವಿಶ್ವದಲ್ಲಿಯೇ ಹೆಸರುವಾಸಿಯಾಗಿದೆ. ಇನ್ನು ವೀರೇಂದ್ರ ಹೆಗ್ಗಡೆಯವರು ದೂರದೃಷ್ಟಿವುಳ್ಳವರು. ಅವರ ಆಲೋಚನೆಗಳು ಜನಪರ ಹಾಗೂ ಜನಹಿತವಾಗಿರುತ್ತದೆ. ನಾಡಿನ ಹಿರಿಮೆ ಗರಿಮೆಗೆ ಡಾ. ಹೆಗ್ಗಡೆಯವರ ಮುಂದಾಳತ್ವದಲ್ಲಿ ಧರ್ಮಸ್ಥಳ ಕ್ಷೇತ್ರವು ತನ್ನದೇ ಆದ ರೀತಿಯಲ್ಲಿ ಅವಿರತವಾಗಿ ಕಾಣಿಗೆ ನೀಡುತ್ತಲೇ ಬಂದಿದೆ.

Comments

Leave a Reply

Your email address will not be published. Required fields are marked *